“ಪೊಲೀಸ್ ಅಂದರೆ ಭಯವಲ್ಲ, ಭರವಸೆ” ಎಂಬ ಸಂದೇಶದೊಂದಿಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ನಡೆದ ತೆರೆದ ಮನೆ ಕಾರ್ಯಕ್ರಮದ ಅಂಗವಾಗಿ, ಶಾಲಾ ಮಕ್ಕಳಿಗೆ ಪೊಲೀಸ್ ಜೊತೆ ಸಂವಹನ ಮತ್ತು ಸಹಕಾರ, 112 ತುರ್ತು ಸಹಾಯವಾಣಿ, 1930 ಸೈಬರ್ ಅಪರಾಧ ಸಹಾಯವಾಣಿ, 1098 ಮಕ್ಕಳ ಸಹಾಯವಾಣಿ, ಪೋಕ್ಸೋ ಕಾಯ್ದೆಯ ಕುರಿತು, ಸಾಮಾನ್ಯ ಕಾನೂನು ಹಾಗೂ ಠಾಣೆಯ ಕಾರ್ಯವೈಖರಿ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
