ಚಾಮರಾಜನಗರ ಜಿಲ್ಲೆಯಿಂದ ತಮಿಳುನಾಡು ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಹಾಗೂ ತಮಿಳುನಾಡು ಗಡಿಭಾಗಕ್ಕೆ ಇಂದು ಭೇಟಿ ನೀಡಲಾಯಿತು. ಗಡಿಭಾಗದ ಪ್ರಸ್ತುತ ಪರಿಸ್ಥಿತಿ, ಭದ್ರತಾ ವ್ಯವಸ್ಥೆ ಹಾಗೂ ರಸ್ತೆ ಸಂಚಾರಕ್ಕೆ ಸಂಬಂಧಿಸಿದ ಸ್ಥಿತಿಗತಿಗಳನ್ನು ಅಧಿಕಾರಿಗಳು ಅವಲೋಕಿಸಿದರು.

ಇದೇ ವೇಳೆ ಸತ್ಯಮಂಗಲ ಅರಣ್ಯ ವ್ಯಾಪ್ತಿಯ ಚೆಕ್‌ಪೋಸ್ಟ್‌ಗೂ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಲಾಯಿತು. ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಯಿಂದ ಭದ್ರತಾ ವ್ಯವಸ್ಥೆ ಮತ್ತು ಕರ್ತವ್ಯ ನಿರ್ವಹಣೆಯ ಕುರಿತು ಮಾಹಿತಿ ಪಡೆಯಲಾಯಿತು.
ಗಡಿಭಾಗದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಕುರಿತು ಕರ್ತವ್ಯನಿಯೋಜಿತ ಅಧಿಕಾರಿಗಳೊಂದಿಗೆ ವಿಚಾರ ವಿನಿಮಯ ನಡೆಸಲಾಯಿತು. ಗಡಿ ಭಾಗದಲ್ಲಿ ಪೊಲೀಸ್, ಅರಣ್ಯ ಹಾಗೂ ಸಂಬಂಧಪಟ್ಟ ಇಲಾಖೆಗಳ ನಡುವೆ ನಿರಂತರ ಸಮನ್ವಯ ಕಾಪಾಡಿಕೊಳ್ಳುವಂತೆ ಸೂಚಿಸಲಾಯಿತು.

ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಪ್ರಸ್ತುತ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಮನ್ವಯ ಸಾಧಿಸಲಾಯಿತು. ಗಡಿಭಾಗದ ಭದ್ರತೆ ಹಾಗೂ ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.


