ಪೊಲೀಸರ ಸಮಯೋಚಿತ ಕಾರ್ಯಾಚರಣೆ: ಮೂವರ ಪ್ರಾಣ ರಕ್ಷಣೆ

ಜೆ.ಪಿ.ನಗರ 8ನೇ ಹಂತದ ಅಪಾರ್ಟ್‌ಮೆಂಟ್‌ನಲ್ಲಿ ಲಿಫ್ಟ್‌ವೊಂದರಲ್ಲಿ ತಾಂತ್ರಿಕ ದೋಷ ಉಂಟಾಗಿ ಒಂದೇ ಕುಟುಂಬದ ಮೂವರು ಸಿಲುಕಿಕೊಂಡಿದ್ದರು.ಲಿಫ್ಟ್‌ನಲ್ಲಿ ಸಿಲುಕಿದ್ದವರ ಪೈಕಿ ಓರ್ವರು ಪೊಲೀಸರ ಸಹಾಯ ಕೋರಿದ್ದು, ಕೂಡಲೇ ನಮ್ಮ-112 ತುರ್ತು ಸಹಾಯವಾಣಿಗೆ ಕರೆ ಮಾಡಿದ್ದಾರೆ.

ಮಾಹಿತಿ ಪಡೆದ 112 ಸಿಬ್ಬಂದಿ, ತಲಘಟ್ಟಪುರ ಪೊಲೀಸ್ ಠಾಣೆಯ ಹೊಯ್ಸಳ-158ರಲ್ಲಿ ಕರ್ತವ್ಯದಲ್ಲಿದ್ದ ಎಎಸ್‌ಐ ಪ್ರಕಾಶ್ ಎಲ್. ಹಾಗೂ ಪಿಸಿ ಸಂಜೀವ್ ಕುಮಾರ್ ಎಂ.ಡಿ. ಅವರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಲಭ್ಯವಾದ ತಕ್ಷಣ ಸ್ಥಳಕ್ಕೆ ತೆರಳಿದ ಪೊಲೀಸ್ ಸಿಬ್ಬಂದಿ, ಪರಿಸ್ಥಿತಿಯನ್ನು ಪರಿಶೀಲಿಸಿ ಅಪಾರ್ಟ್‌ಮೆಂಟ್ ನಿರ್ವಹಣಾ ಸಿಬ್ಬಂದಿಯೊಂದಿಗೆ ಸಮನ್ವಯ ಸಾಧಿಸಿದ್ದಾರೆ.

ತಾಂತ್ರಿಕ ದೋಷದಿಂದ ಸ್ಥಗಿತಗೊಂಡಿದ್ದ ಲಿಫ್ಟ್‌ನ್ನು ಸುರಕ್ಷಿತವಾಗಿ ತೆರೆಯುವ ಮೂಲಕ ಒಳಗೆ ಸಿಲುಕಿದ್ದ ಒಂದೇ ಕುಟುಂಬದ ಮೂವರನ್ನೂ ಸುರಕ್ಷಿತವಾಗಿ ಹೊರಗೆ ಕರೆತಂದಿದ್ದಾರೆ.

ತುರ್ತು ಪರಿಸ್ಥಿತಿಯಲ್ಲಿ ಬೆಂಗಳೂರು ನಗರ ಪೊಲೀಸರ ತ್ವರಿತ ಸ್ಪಂದನೆ ಹಾಗೂ ಪರಿಣಾಮಕಾರಿ ಕಾರ್ಯಾಚರಣೆಗೆ ಈ ಘಟನೆ ಸಾಕ್ಷಿಯಾಗಿದೆ.

ಹೊಯ್ಸಳ-158 ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆ ಮತ್ತು ಅಪಾರ್ಟ್‌ಮೆಂಟ್ ನಿರ್ವಹಣಾ ಸಿಬ್ಬಂದಿಯ ಸಹಕಾರದಿಂದ ಮೂವರನ್ನೂ ಸುರಕ್ಷಿತವಾಗಿ ರಕ್ಷಿಸಲಾಗಿದೆ.

ನಮ್ಮ-112 ತುರ್ತು ಸ್ಪಂದನಾ ವ್ಯವಸ್ಥೆಯ ಮೂಲಕ ತ್ವರಿತವಾಗಿ ನೆರವು ಒದಗಿಸುವ ಮೂಲಕ ಬೆಂಗಳೂರು ನಗರ ಪೊಲೀಸರು ಸಾರ್ವಜನಿಕರ ವಿಶ್ವಾಸವನ್ನು ಮತ್ತಷ್ಟು ಬಲಪಡಿಸಿದ್ದಾರೆ.

Related Articles

TRENDING ARTICLES