“100 Best Police Chiefs of India” ಪಟ್ಟಿಯಲ್ಲಿ ಸ್ಥಾನ ಪಡೆದ ಮೈಸೂರು ಎಸ್‌ಪಿ

Fame India-Asia Post ಆಯೋಜಿಸಿದ “100 Best Police Chiefs of India” ಪಟ್ಟಿಯಲ್ಲಿ ಸ್ಥಾನ ಪಡೆದ ಮೈಸೂರು ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ, ಐಪಿಎಸ್ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು.

ಮೈಸೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ಉತ್ತಮ ಕಾರ್ಯನಿರ್ವಹಣೆ ಹಾಗೂ ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಈ ಪ್ರತಿಷ್ಠಿತ ಪಟ್ಟಿಯಲ್ಲಿ ಸ್ಥಾನ ನೀಡಲಾಗಿದೆ.

ಈ ಹಿನ್ನೆಲೆಯಲ್ಲಿ ಅಪರ ಪೊಲೀಸ್ ಅಧೀಕ್ಷಕ ಮಲ್ಲಿಕ್ ಸಿ. ಅವರು ಮೈಸೂರು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು.

ಪೊಲೀಸ್ ಇಲಾಖೆಯಲ್ಲಿ ಪರಿಣಾಮಕಾರಿ ಆಡಳಿತ, ಉತ್ತಮ ಕಾರ್ಯನಿರ್ವಹಣೆ ಹಾಗೂ ಜನಸ್ನೇಹಿ ಪೊಲೀಸ್ ಸೇವೆಗೆ ದೊರೆತ ಈ ಗೌರವಕ್ಕೆ ಜಿಲ್ಲಾ ಪೊಲೀಸ್ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.

Related Articles

TRENDING ARTICLES