ಮಡಿವಾಳ ಮೆಡಿಕಲ್ ಶಾಪ್ ಮಾಲೀಕನ ಭೀಕರ ಹತ್ಯೆ.. 24 ಗಂಟೆಯೊಳಗೆ 6 ಮಂದಿ ಬಂಧನ

ಮಡಿವಾಳ ಅಂಡರ್‌ಪಾಸ್ ಬಳಿ ಮೆಡಿಕಲ್ ಶಾಪ್ ಮಾಲೀಕ ಸುಹೇಲ್ ಎಂಬವರನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಹತ್ಯೆ ಮಾಡಿದ ಪ್ರಕರಣವನ್ನು ಪೊಲೀಸರು ಕ್ಷಿಪ್ರವಾಗಿ ಭೇದಿಸಿದ್ದಾರೆ. ಘಟನೆ ನಡೆದ 24 ಗಂಟೆಯೊಳಗೆ ರೌಡಿಶೀಟರ್ ಆದಿಲ್ ಸೇರಿದಂತೆ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಹಳೆಯ ದ್ವೇಷವೇ ಕೊಲೆಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಕಳೆದ ಜನವರಿಯಲ್ಲಿ ನಡೆದ ಶಬ್ಬೀರ್ ಕೊಲೆ ಪ್ರಕರಣದ ವಿಚಾರದಲ್ಲಿ ಸುಹೇಲ್ ಕುಟುಂಬ ಹಾಗೂ ರೌಡಿಶೀಟರ್ ಆದಿಲ್ ನಡುವೆ ವೈಮನಸ್ಸು ಇತ್ತು ಎನ್ನಲಾಗಿದೆ.

ಇದೇ ದ್ವೇಷದ ಹಿನ್ನೆಲೆಯಲ್ಲಿ ಪ್ರತೀಕಾರದ ಹತ್ಯೆ ನಡೆದಿದೆಯೇ ಅಥವಾ ಮಂಗಮ್ಮನಪಾಳ್ಯದಲ್ಲಿ ಪ್ರಾಬಲ್ಯ ಸಾಧಿಸುವ ವಿಚಾರವೇ ಕೊಲೆಗೆ ಕಾರಣವೇ ಎಂಬ ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Related Articles

TRENDING ARTICLES