ಹಾವೇರಿ: ಸುಲಿಗೆ ಪ್ರಕರಣವೊಂದನ್ನು ತ್ವರಿತವಾಗಿ ಭೇದಿಸುವಲ್ಲಿ ಬಂಕಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ.
ಪ್ರಕರಣದ ಬೆನ್ನಲ್ಲೇ ಕಾರ್ಯಾಚರಣೆಗೆ ಇಳಿದ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿ ಕೃತ್ಯಕ್ಕೆ ಬಳಸಿದ್ದ ಕಾರು ಹಾಗೂ ಮೊಬೈಲ್‌ನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳ ಬಂಧನದೊಂದಿಗೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಸಾಕ್ಷ್ಯಗಳನ್ನು ಕಲೆಹಾಕಿರುವ ಪೊಲೀಸರು, ಸುಲಿಗೆ ಕೃತ್ಯದ ಹಿನ್ನೆಲೆ ಹಾಗೂ ಆರೋಪಿಗಳ ಪಾತ್ರದ ಕುರಿತು ತನಿಖೆ ಮುಂದುವರಿಸಿದ್ದಾರೆ.
ತ್ವರಿತ ಕಾರ್ಯಾಚರಣೆ ನಡೆಸಿ ಸುಲಿಗೆ ಪ್ರಕರಣ ಭೇದಿಸಿದ ಬಂಕಾಪುರ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.


