ಅಪಘಾತದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ನಿಧನ – ಸ್ವಗ್ರಾಮದಲ್ಲಿ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ

ಕರ್ತವ್ಯದ ನಿಮಿತ್ತ ಮಧ್ಯಪ್ರದೇಶಕ್ಕೆ ತೆರಳಿದ್ದ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅಕಾಲಿಕವಾಗಿ ವಿಧಿವಶರಾದ ಬೆಂಗಳೂರು ಆಗ್ನೇಯ ವಿಭಾಗದ ಸಿಇಎನ್ ಪೊಲೀಸ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ರವಿ ಕೆ.ಬಿ. ಅವರ ಅಂತ್ಯಕ್ರಿಯೆ ಸ್ವಗ್ರಾಮದಲ್ಲಿ ನಡೆಯಿತು.

ಮೈಸೂರು ಜಿಲ್ಲಾ ಪೊಲೀಸ್ ವತಿಯಿಂದ ಮೃತ ಪೊಲೀಸ್ ಇನ್‌ಸ್ಪೆಕ್ಟರ್ ಅವರ ಪಾರ್ಥಿವ ಶರೀರಕ್ಕೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲಾಯಿತು. ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಂತಿಮ ನಮನ ಸಲ್ಲಿಸಿ, ಅಗಲಿದ ಪೊಲೀಸ್ ಅಧಿಕಾರಿಯ ಸೇವೆಯನ್ನು ಸ್ಮರಿಸಿದರು.

ಕರ್ತವ್ಯನಿಷ್ಠೆಯಿಂದ ಸೇವೆ ಸಲ್ಲಿಸುತ್ತಿದ್ದ ಪೊಲೀಸ್ ಇನ್‌ಸ್ಪೆಕ್ಟರ್ ರವಿ ಕೆ.ಬಿ. ಅವರ ಅಕಾಲಿಕ ನಿಧನ ಪೊಲೀಸ್ ಇಲಾಖೆಗೆ ಹಾಗೂ ಅವರ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ.

Related Articles

TRENDING ARTICLES