ಚಿಕ್ಕಬಳ್ಳಾಪುರ ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾಗಿ ಪದ್ಮಿನಿ ಸಾಹು, ಐಪಿಎಸ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಅಧಿಕಾರ ಸ್ವೀಕಾರದ ಬಳಿಕ ಜಿಲ್ಲೆಯ ಕಾನೂನು–ಸುವ್ಯವಸ್ಥೆ, ಅಪರಾಧ ನಿಯಂತ್ರಣ ಹಾಗೂ ಸಾರ್ವಜನಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಿದ್ದಾರೆ.

ಜಿಲ್ಲೆಯಲ್ಲಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವುದು, ಮಹಿಳೆಯರು ಮತ್ತು ಸಾರ್ವಜನಿಕರ ಸುರಕ್ಷತೆ ಬಲಪಡಿಸುವುದು ಹಾಗೂ ಪೊಲೀಸ್ ಇಲಾಖೆಯ ಕಾರ್ಯವೈಖರಿಯನ್ನು ಮತ್ತಷ್ಟು ಪರಿಣಾಮಕಾರಿಗೊಳಿಸುವುದು ನೂತನ ಎಸ್ಪಿ ಅವರ ಪ್ರಮುಖ ಆದ್ಯತೆಗಳಾಗಿವೆ.
ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯೊಂದಿಗೆ ಸಮನ್ವಯ ಸಾಧಿಸಿ, ಜಿಲ್ಲೆಯಲ್ಲಿ ಶಾಂತಿ–ಸುವ್ಯವಸ್ಥೆ ಕಾಪಾಡುವ ಜೊತೆಗೆ ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಒತ್ತು ನೀಡುವ ನಿರೀಕ್ಷೆಯಿದೆ.


