ಇಂದು ಕಾರಟಗಿ ಪೊಲೀಸ್ ಠಾಣೆಗೆ ಭೇಟಿ ನೀಡಿ, ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳೊಂದಿಗೆ ನೇರವಾಗಿ ಸಮಾಲೋಚನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುವ ವೇಳೆ ಎದುರಿಸುತ್ತಿರುವ ಸಮಸ್ಯೆಗಳು, ಅಗತ್ಯತೆಗಳು ಹಾಗೂ ವಿವಿಧ ಕುಂದುಕೊರತೆಗಳನ್ನು ಆಲಿಸಲಾಯಿತು. ಸಿಬ್ಬಂದಿಗಳಿಂದ ಬಂದ ಸಮಸ್ಯೆಗಳ ಕುರಿತು ಮಾಹಿತಿ ಪಡೆದು, ಅವುಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಕುರಿತು ಚರ್ಚಿಸಲಾಯಿತು.

ಇದೇ ವೇಳೆ ಬಿಜೆಪಿಯ ಪಾದಯಾತ್ರೆ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಬಂದೋಬಸ್ತ್ ವ್ಯವಸ್ಥೆಯ ಕುರಿತು ಅಧಿಕಾರಿಗಳಿಗೆ ಸೂಕ್ತ ಸಲಹೆ ಮತ್ತು ಸೂಚನೆಗಳನ್ನು ನೀಡಲಾಯಿತು.
ಪಾದಯಾತ್ರೆ ನಡೆಯುವ ಮಾರ್ಗ, ಪ್ರಮುಖ ಸ್ಥಳಗಳು ಹಾಗೂ ಜನದಟ್ಟಣೆ ಉಂಟಾಗುವ ಪ್ರದೇಶಗಳಲ್ಲಿ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಯಿತು. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸಂಚಾರ ವ್ಯವಸ್ಥೆ ಸುಗಮಗೊಳಿಸುವುದು ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಿಬ್ಬಂದಿಯನ್ನು ಸೂಕ್ತವಾಗಿ ನಿಯೋಜಿಸುವಂತೆ ತಿಳಿಸಲಾಯಿತು.
ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಠಾಣೆಯ ದೈನಂದಿನ ಕಾರ್ಯವೈಖರಿ, ಸಿಬ್ಬಂದಿಗಳ ಕರ್ತವ್ಯ ನಿರ್ವಹಣೆ ಹಾಗೂ ಸಾರ್ವಜನಿಕರಿಗೆ ಪರಿಣಾಮಕಾರಿ ಪೊಲೀಸ್ ಸೇವೆ ಒದಗಿಸುವ ಬಗ್ಗೆಯೂ ಅಗತ್ಯ ಮಾರ್ಗದರ್ಶನ ನೀಡಲಾಯಿತು.


