26 ಕೇಂದ್ರಗಳಲ್ಲಿ APC ನೇಮಕಾತಿ ಪರೀಕ್ಷೆ – ಕಟ್ಟುನಿಟ್ಟಿನ ತಪಾಸಣೆ

ತುಮಕೂರು ಜಿಲ್ಲೆಯಲ್ಲಿ ಇಂದು 26 ಪರೀಕ್ಷಾ ಕೇಂದ್ರಗಳಲ್ಲಿ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (APC) ನೇಮಕಾತಿ ಪರೀಕ್ಷೆ–2026 ಶಾಂತಿಯುತವಾಗಿ ಹಾಗೂ ಪಾರದರ್ಶಕವಾಗಿ ನಡೆಯಿತು.

ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮಗಳಿಗೆ ಅವಕಾಶ ನೀಡದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮಾರ್ಗಸೂಚಿಯಂತೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು.

ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕ ಅಶೋಕ್ ವೆಂಕಟ್, ಐಪಿಎಸ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ನೇರ ನೇತೃತ್ವದಲ್ಲಿ ಅಭ್ಯರ್ಥಿಗಳನ್ನು ಕೂಲಂಕುಷವಾಗಿ ತಪಾಸಣೆ (Frisking) ನಡೆಸಿ ಪರೀಕ್ಷಾ ಕೇಂದ್ರದೊಳಗೆ ಪ್ರವೇಶಿಸಲು ಅವಕಾಶ ನೀಡಲಾಯಿತು.

ಜಿಲ್ಲೆಯ ಎಲ್ಲಾ 26 ಪರೀಕ್ಷಾ ಕೇಂದ್ರಗಳಲ್ಲೂ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಪ್ರದೇಶಗಳಲ್ಲೂ ಸಾರ್ವಜನಿಕರ ಹಿತದೃಷ್ಟಿಯಿಂದ ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿತ್ತು.

Related Articles

TRENDING ARTICLES