ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗಾಗಿ ಇಂದು ಜಿಲ್ಲೆಯ ವಿವಿಧ ಶಾಲಾ-ಕಾಲೇಜುಗಳಲ್ಲಿ ಲಿಖಿತ ಪರೀಕ್ಷೆ ನಡೆಯಿತು.ಪರೀಕ್ಷೆ ಹಿನ್ನೆಲೆಯಲ್ಲಿ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಕಾನೂನು ಸುವ್ಯವಸ್ಥೆ ಹಾಗೂ ಬಂದೋಬಸ್ತ್ ವ್ಯವಸ್ಥೆಯನ್ನು ಪರಿಶೀಲಿಸಲಾಯಿತು.

ಪರೀಕ್ಷೆ ಯಾವುದೇ ಅಹಿತಕರ ಘಟನೆಗಳಿಲ್ಲದೆ ಸುಗಮವಾಗಿ ನಡೆಯುವಂತೆ ಪೊಲೀಸ್ ಸಿಬ್ಬಂದಿಯಿಂದ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿತ್ತು.ಪರೀಕ್ಷಾ ಕೇಂದ್ರಗಳಲ್ಲಿನ ಭದ್ರತಾ ವ್ಯವಸ್ಥೆ, ಅಭ್ಯರ್ಥಿಗಳ ಪ್ರವೇಶ ಹಾಗೂ ಬಂದೋಬಸ್ತ್ ಕರ್ತವ್ಯದ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿದರು.


