ಇನ್‌ಸ್ಟಾಗ್ರಾಂನಲ್ಲಿ ಕತ್ತಿ ಹಿಡಿದು ಪೋಸ್ ಮಾಡಿದ ಹುಬ್ಬಳ್ಳಿ ಯುವಕನಿಗೆ ಈಗ ಪೊಲೀಸ್ ಶಾಕ್ ಎದುರಾಗಿದೆ..
ಕತ್ತಿ ಹಿಡಿದುಕೊಂಡು ಫೋಟೋ ತೆಗೆಸಿಕೊಂಡು, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಯುವಕನನ್ನು ಹುಬ್ಬಳ್ಳಿಯ ಗೌರಿಗುಡಿ ಪ್ರದೇಶದ ನಿವಾಸಿ ಎಂದು ಗುರುತಿಸಲಾಗಿದೆ.

ಈತನ ವಿರುದ್ಧ ಹುಬ್ಬಳ್ಳಿ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಕೈಯಲ್ಲಿ ಕತ್ತಿ ಹಿಡಿದುಕೊಂಡು ಸಾರ್ವಜನಿಕರಲ್ಲಿ ಭಯದ ವಾತಾವರಣ ಮೂಡಿಸುವ ರೀತಿಯಲ್ಲಿ ವರ್ತಿಸಿದ್ದ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಶಸ್ತ್ರಾಸ್ತ್ರ ಪ್ರದರ್ಶಿಸಿ ಪುಂಡಾಟಿಕೆ ಮಾಡುವವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ.


