ಹಳಿಯಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ: ಅಂತರರಾಜ್ಯ ಕಳ್ಳರ ಬಂಧನ

0

ಹಳಿಯಾಳ: ಜುಲೈ 16 ರಂದು ನಡೆದ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಹಳಿಯಾಳ ಪೊಲೀಸರು, ಮಹಾರಾಷ್ಟ್ರದ ಕುಖ್ಯಾತ ಅಂತರರಾಜ್ಯ ಕಳ್ಳರ ತಂಡವನ್ನು ಬಂಧಿಸಿದ್ದಾರೆ. ಬಂಧಿತರಿಂದ ಅಂದಾಜು ₹7.95 ಲಕ್ಷ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ₹4 ಲಕ್ಷ ಮೌಲ್ಯದ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಪಂಡರಾಪುರ ವ್ಯಾಪ್ತಿಗೆ ಸೇರಿದ ಕುಖ್ಯಾತ ಕಳ್ಳರಾದ ಲಖನ ಅಶೋಕ ಕುಲಕರ್ಣಿ (31), ಸಂದೀಪ ದಿಲೀಪ ಲವಟೆ (25), ವಿವೇಕ ಶಿವಪ್ಪ ಕುಂಬಾರ (26), ಮತ್ತು ಅಜೀಜ್ ಅಲಿಯಾಸ್ ಚೋಟೆ ದಾದಾಪೀರ ಮನಗುಳಿ (28) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಜೈಲಿಗೆ ಕಳುಹಿಸಲಾಗಿದೆ.

ಪೊಲೀಸ್ ವಿಚಾರಣೆ ವೇಳೆ, ಈ ಕಳ್ಳರ ತಂಡ ಯಲ್ಲಾಪುರ ಮತ್ತು ಕುಂದಾಪುರದಲ್ಲಿ ನಡೆದ ಕಳ್ಳತನ ಪ್ರಕರಣಗಳಲ್ಲೂ ಭಾಗಿಯಾಗಿರುವುದನ್ನು ಒಪ್ಪಿಕೊಂಡಿದೆ. ಈ ಆರೋಪಿಗಳ ಮೇಲೆ ಈಗಾಗಲೇ 32ಕ್ಕೂ ಹೆಚ್ಚು ಕಳ್ಳತನ, ಸುಲಿಗೆ, ದರೋಡೆ ಮತ್ತು ಹಲ್ಲೆ ಪ್ರಕರಣಗಳು ವಿವಿಧ ರಾಜ್ಯಗಳ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿವೆ. ಇವುಗಳಲ್ಲಿ ಮೂರು ಪ್ರಕರಣಗಳಲ್ಲಿ ಇವರಿಗೆ ಶಿಕ್ಷೆಯೂ ಆಗಿದೆ.

ಉತ್ತರ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ. ಎನ್., ಹೆಚ್ಚುವರಿ ಅಧೀಕ್ಷಕ ಜಗದೀಶ ನಾಯ್ಕ ಮತ್ತು ಇತರೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಹಳಿಯಾಳ ಪಿಎಸ್‌ಐಗಳಾದ ಬಸವರಾಜ ಮಬನೂರ ಮತ್ತು ಕೃಷ್ಣ ಅರಕೇರಿ ಅವರ ನೇತೃತ್ವದ ಕಾರ್ಯಾಚರಣೆಯಲ್ಲಿ ಗಣಪತಿ, ಶ್ರೀಶೈಲ್ ಜಿ.ಎಂ., ವಿನೋದ ಜಿ.ಬಿ., ಲಕ್ಷ್ಮಣ ಪೂಜಾರಿ, ಅರವಿಂದ ಭಜಂತ್ರಿ, ಮಂಜುನಾಥ ಬಾಲಿ, ಆಯಾಜ್ ಯಾದವಾಡ, ಕಾಶಿನಾಥ ಬಿಳ್ಳೂರ, ವಿನಾಯಕ ನಾಯ್ಕ, ಯೋಗೇಶ ಗೌಡಾ ಹಾಗೂ ದಾಂಡೇಲಿ ಠಾಣೆಯ ಸಿಬ್ಬಂದಿಗಳಾದ ಕೃಷ್ಣ ಬೆಳ್ಳಿವರಿ, ಉದಯ ಗುನಗಾ, ಉಮೇಶ ತೇಲಿ ಭಾಗವಹಿಸಿದ್ದರು. ಈ ಯಶಸ್ವಿ ಕಾರ್ಯಾಚರಣೆಗೆ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ, ಸಂಚಾರ ನಿಯಮಗಳ ಜಾಗೃತಿ ಕಾರ್ಯಕ್ರಮ

0

ಮೈಸೂರು: ಜೆಎಸ್ಎಸ್ ಕಾನೂನು ಕಾಲೇಜಿನ ವಿದ್ಯಾರ್ಥಿಗಳಿಗೆ ನರಸಿಂಹರಾಜ ಸಂಚಾರ ಠಾಣೆಯ ಅಧಿಕಾರಿಗಳಿಂದ ರಸ್ತೆ ಸುರಕ್ಷತೆ, ಸಂಚಾರ ನಿಯಮಗಳು ಮತ್ತು ನಾಗರಿಕ ನಡವಳಿಕೆಯ ಕುರಿತು ಅರಿವು ಮೂಡಿಸಲಾಯಿತು.

ಬೀದರ ಜಿಲ್ಲೆಯ ಮುಡಬಿ ಪೊಲೀಸ್ ಠಾಣೆ ರವರಿಂದ ತೆರೆದ ಮನೆ ಕಾರ್ಯಕ್ರಮ

0

ಮಾನ್ಯ ಶ್ರೀ ಪ್ರದೀಪ್ ಗುಂಟಿ, ಐ.ಪಿ.ಎಸ್, ಪೊಲೀಸ್ ವರಿಷ್ಠಾಧಿಕಾರಿಗಳು, ಬೀದರ ಜಿಲ್ಲೆ ರವರ ನಿರ್ದೇಶನದಂತೆ ಮುಡಬಿ ಪೊಲೀಸ್ ಠಾಣೆಯ ಪಿ.ಎಸ್.ಐ ಕು. ಜಯಶ್ರೀ ರವರು ತಮ್ಮ ಸಿಬ್ಬಂದಿ ರವರೊಂದಿಗೆ ತಮ್ಮ ಠಾಣೆಯಲ್ಲಿ ಶಾಲಾ ಮಕ್ಕಳಿಗೆ ಈಗಿನಿಂದಲೇ ಕಾನೂನಿನ ಬಗ್ಗೆ ಅರಿವು ಮೂಡಿಸಿದ್ದಲ್ಲಿ ಉತ್ತಮವಾದ ಸಮಾಜವನ್ನು ರೂಪಿಸುವಲ್ಲಿ ಕೊಡುಗೆ ನೀಡುವವರಾಗಿದ್ದರಿಂದ ಮಕ್ಕಳಿಗೆ ಕಾನೂನುಗಳ ಬಗ್ಗೆ, ಸಂಚಾರ ನಿಯಮ, ಪೊಕ್ಸೊ, ಜೆ.ಜೆ ಕಾಯ್ದೆ ಹಾಗೂ ಇತರೆ ಕಾನೂನಿನ ಬಗ್ಗೆ ಮತ್ತು ಪೊಲೀಸ್ ಕಾರ್ಯ ವೈಖರಿ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಿರುತ್ತಾರೆ. ಮಕ್ಕಳಿಗೆ ಉತ್ತಮ ಜ್ಞಾನವನ್ನು ಮೂಡಿಸುವ ಮಹತ್ವದ ಕಾರ್ಯದಲ್ಲಿ ತೊಡಗಿದ ಪೊಲೀಸ್ ಅಧಿಕಾರಿ, ಸಿಬ್ಬಂದಿರವರ ಕಾರ್ಯಕ್ಕೆ ಶ್ಲಾಘಿಸಲಾಗಿದೆ.

ದೇವಸ್ಥಾನಗಳಲ್ಲಿ ಕಳ್ಳತನ ನಡೆದ ಸ್ಥಳ ಪರಿಶೀಲಿಸಿದ ಪೊಲೀಸ್‌ ಅಧೀಕ್ಷಕರು

0

ಮಂಡ್ಯ: ಮಾನ್ಯ ಪೊಲೀಸ್‌ ಅಧೀಕ್ಷಕರಾದ ಶ್ರೀ ಮಲ್ಲಿಕಾರ್ಜುನ ಬಾಲದಂಡಿ ಐಪಿಎಸ್‌ ರವರು ಕಿರುಗಾವಲು ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಾಳಿಗೆಕೊಪ್ಪಲು ಗ್ರಾಮ ಏಳೂರಮ್ಮ & ದಂಡಿಮಾರಮ್ಮ ದೇವಸ್ಥಾನಗಳಲ್ಲಿ ಕಳ್ಳತನ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕೃತ್ಯದ ಬಗ್ಗೆ ಮಾಹಿತಿ ಪಡೆದು ತನಿಖಾಧಿಕಾರಿಗೆ ಪ್ರಕರಣದ ತನಿಖೆ ಮತ್ತು ಆರೋಪಿಗಳ ಪತ್ತೆ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಿರುತ್ತಾರೆ.

ಬ್ರೂಸ್ ಪೇಟೆ ಪೊಲೀಸರ ಕಾರ್ಯಚರಣೆ

0

ಬಳ್ಳಾರಿ: ಬ್ರೂಸ್ ಪೇಟೆ ಪೊಲೀಸರ ಕಾರ್ಯಚರಣೆ ಒಬ್ಬ ಕಳ್ಳತನ ಆರೋಪಿತನ ಬಂಧನ ಆತನಿಂದ ರೂ. 4,08,040/- ಬೆಲೆಬಾಳುವ ಬೆಳ್ಳಿ & ಬಂಗಾರದ ಆಭರಣಗಳು ವಶ.

ಚಿಕ್ಕಬಳ್ಳಾಪುರದಲ್ಲಿ “ಮನೆ ಮನೆಗೆ ಪೊಲೀಸ್” ಕಾರ್ಯಕ್ರಮ

0

ಕೆಂಚಾರ್ಲಹಳ್ಳಿ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ಠಾಣಾ ವ್ಯಾಪ್ತಿಯ ಚೀಲಕಲನೇರ್ಪು ಗ್ರಾಮದ ಮನೆಗಳಿಗೆ ಭೇಟಿ ನೀಡಿ, ಹೊಸ ಬೀಟ್ ವ್ಯವಸ್ಥೆಯಾದ ”ಮನೆ ಮನೆಗೆ ಪೊಲೀಸ್” ಕಾರ್ಯಕ್ರಮದ ಬಗ್ಗೆ ಜನರಿಗೆ ಮಾಹಿತಿಯನ್ನು ನೀಡಿದ್ದು, ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಸೈಬರ್ ಅಪರಾಧಗಳು ಹಾಗೂ ತುರ್ತು ಸಹಾಯವಾಣಿಗಳ ಬಗ್ಗೆ ಅರಿವು ಮೂಡಿಸಿರುತ್ತಾರೆ.

ಬೀಳಗಿ ಪೊಲೀಸರಿಗೆ ವೈದ್ಯಕೀಯ ತರಬೇತಿ

0

ಬೀಳಗಿ ಪೊಲೀಸ್ ಠಾಣೆಯ ಅಧಿಕಾರಿ/ಸಿಬ್ಬಂದಿಯವರಿಗೆ, ರಸ್ತೆ ಅಪಘಾತ ಸಂದರ್ಭಗಳಲ್ಲಿ ಘಟನಾ ಸ್ಥಳದಲ್ಲಿ ಪ್ರಥಮ ಚಿಕಿತ್ಸೆ, ಗಾಯಳುಗಳನ್ನು ಆಸ್ಪತ್ರೆಗಳಿಗೆ ಸಾಗಿಸುವಾಗ ತಕ್ಷಣದ ಆರೈಕೆ ಮತ್ತು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳ ಕುರಿತು ತಜ್ಞ ವೈದ್ಯರಿಂದ ತರಬೇತಿ ನೀಡಲಾಯಿತು. ಪ್ರತಿಯೊಬ್ಬ ಅಧಿಕಾರಿ/ಸಿಬ್ಬಂದಿಯವರು ತಕ್ಷಣವೇ ಪ್ರತಿಕ್ರಿಯಿಸಲು ಮತ್ತು ಜೀವಗಳನ್ನು ಉಳಿಸಲು ಸಿದ್ಧರಾಗಿದ್ದಾರೆ ಎಂದು ಖಚಿತಪಡಿಸಿಕೊಳ್ಳಲಾಗಿರುತ್ತದೆ.

ಕಾರವಾರ ಜಿಲ್ಲೆಯಲ್ಲಿ ವಾರದ ಪೊಲೀಸ್ ಕವಾಯತು

0

ಕಾರವಾರ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶ್ರೀ ಕೃಷ್ಣಮೂರ್ತಿ, ಜಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು -1 ರವರ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ವಾರದ ಕವಾಯತು ಕೈಗೊಂಡು,ಕುಂದು ಕೊರತೆಯನ್ನು ಆಲಿಸಲಾಯಿತು.

ಉಡುಪಿ ಜಿಲ್ಲೆಯಲ್ಲಿ ಗಣಪತಿ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಸಭೆ

0

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಅಧಿಕಾರಿ ಸಿಬ್ಬಂದಿಗಳೊಂದಿಗೆ ಜಿಲ್ಲಾ ಪೊಲೀಸ್ , ಅಧೀಕ್ಷಕರು ಮುಂಬರುವ ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆಯ ಸಮಯದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಬಗ್ಗೆ ಚರ್ಚಿಸಿದರು.

ಕಲಬುರಗಿಯಲ್ಲಿ “ಮನೆ ಮನೆಗೆ ಪೊಲೀಸ್”

0

ಗ್ರಾಮೀಣ ಉಪವಿಭಾಗದ ಕಮಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಕೋಟಾ ಗ್ರಾಮದಲ್ಲಿ “ಮನೆ-ಮನೆಗೆ ಪೊಲೀಸ್” ಎಂಬ ಪರಿಕಲ್ಪನೆಯಡಿ ಮನೆಗಳಿಗೆ ಭೇಟಿ ನೀಡಿ, ಪೊಲೀಸ್ ಇಲಾಖೆಯ ತುರ್ತುಸೇವೆ, ಸೈಬರ್ ಅಪರಾಧ ಹಾಗೂ ಇನ್ನಿತರ ವಿಷಯಗಳ ಬಗ್ಗೆ ತಿಳುವಳಿಕೆ ನೀಡಿ ಅರಿವು ಮೂಡಿಸಲಾಯಿತು.