ಸಂಜಯನಗರ ಪೊಲೀಸ್ ಠಾಣಾ ಸರಹದ್ದಿನ ನ್ಯೂ ಬಿ.ಇ.ಎಲ್. ರಸ್ತೆಯ 2ನೇ ಕ್ರಾಸ್‌ನ ಬೇಕರಿಯೊಂದರ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ದಾಖಲಿಸಿದ್ದ ಪ್ರಕರಣದಲ್ಲಿ ಆರೋಪಿಗೆ 2 ವರ್ಷ ಕಾರಾಗೃಹ ಶಿಕ್ಷೆ ಹಾಗೂ ₹20,000 ದಂಡ ವಿಧಿಸಿ ಮಾನ್ಯ ನ್ಯಾಯಾಲಯ ಆದೇಶಿಸಿದೆ.

ದಿನಾಂಕ 07-08-2022ರಂದು ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸಂಜಯನಗರ ಠಾಣೆ ಪೊಲೀಸರು ದಾಳಿ ನಡೆಸಿ, 1 ಕೆ.ಜಿ. 840 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದರು. ಈ ಸಂಬಂಧ ಎನ್.ಡಿ.ಪಿ.ಎಸ್. ಕಾಯ್ದೆಯಡಿ ಪ್ರಕರಣ ದಾಖಲಿಸಿ, ಆರೋಪಿಯನ್ನು ದಸ್ತಗಿರಿ ಮಾಡಲಾಗಿತ್ತು.
ಪ್ರಕರಣದ ತನಿಖೆಯನ್ನು ಸಮರ್ಥವಾಗಿ ನಡೆಸಿದ ಪೊಲೀಸರು ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ನಿಗದಿತ ಅವಧಿಯಲ್ಲಿ ತನಿಖೆ ಪೂರ್ಣಗೊಳಿಸಿ ಆರೋಪಿಯ ವಿರುದ್ಧ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣಾಪಟ್ಟಿ ಸಲ್ಲಿಸಿದ್ದರು. ವಿಚಾರಣೆ ವೇಳೆ ನ್ಯಾಯಾಲಯದ ಕರ್ತವ್ಯದ ಸಿಬ್ಬಂದಿ ಸಾಕ್ಷಿದಾರರಿಗೆ ಸೂಕ್ತ ರೀತಿಯಲ್ಲಿ ಸಾಕ್ಷ್ಯ ನುಡಿಯಲು ಸಹಕರಿಸಿದ್ದರು. ಪ್ರಧಾನ ಸರ್ಕಾರಿ ಅಭಿಯೋಜಕರು ಹಾಗೂ ಸರ್ಕಾರಿ ಅಭಿಯೋಜಕರು ಅಭಿಯೋಗದ ಪರವಾಗಿ ಪರಿಣಾಮಕಾರಿಯಾಗಿ ವಾದ ಮಂಡಿಸಿದ್ದರು.
ವಾದವನ್ನು ಆಲಿಸಿ ವಿಚಾರಣೆ ನಡೆಸಿದ ಮಾನ್ಯ ನ್ಯಾಯಾಲಯವು ದಿನಾಂಕ 17-07-2026ರಂದು ಆರೋಪಿಗೆ 2 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ₹20,000 ದಂಡ ವಿಧಿಸಿ ತೀರ್ಪು ನೀಡಿದೆ.













