ಮಂಗಳೂರಿನಲ್ಲಿ ಹೆಚ್ಚುತ್ತಿರುವ ನೋ-ಪಾರ್ಕಿಂಗ್ ವಾಹನಗಳ ಹಾವಳಿ. ಪೊಲೀಸರು ಮಾಡಿದ್ದೇನು ಗೊತ್ತಾ?

ಮಂಗಳೂರು: ಮಂಗಳೂರಿನಲ್ಲಿ ನೋ-ಪಾರ್ಕಿಂಗ್ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಕೈಗೊಂಡಿರುವ ಕ್ರಮಗಳು ಇದೀಗ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿವೆ. ನಗರದ ಪ್ರಮುಖ ರಸ್ತೆಗಳಲ್ಲಿ ಹಾಗೂ ವಿಶೇಷವಾಗಿ ವಾಣಿಜ್ಯ ಪ್ರದೇಶಗಳಲ್ಲಿ ನೋ-ಪಾರ್ಕಿಂಗ್ ನಿಯಮವನ್ನು ಉಲ್ಲಂಘಿಸಿ ವಾಹನಗಳನ್ನು ನಿಲ್ಲಿಸುವುದು ಸಾಮಾನ್ಯವಾಗಿದೆ. ಈ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಹಲವು ರೀತಿಯ ಕ್ರಮಗಳನ್ನು ಕೈಗೊಂಡಿದ್ದಾರೆ.

ಮಂಗಳೂರಿನ ಟ್ರಾಫಿಕ್ ಪೊಲೀಸ್ ಇಲಾಖೆಯು ಇದೀಗ ನೋ-ಪಾರ್ಕಿಂಗ್ ನಿಯಮವನ್ನು ಕಠಿಣವಾಗಿ ಜಾರಿ ಮಾಡುತ್ತಿದ್ದು, ನಿಯಮ ಉಲ್ಲಂಘನೆ ಮಾಡುವ ವಾಹನಗಳಿಗೆ ದಂಡ ವಿಧಿಸಲು ಆರಂಭಿಸಿದೆ. ಜೊತೆಗೆ, ತಪ್ಪು ಸ್ಥಳದಲ್ಲಿ ನಿಲ್ಲಿಸಿದ ವಾಹನಗಳನ್ನು ಕ್ರೇನ್ ಮೂಲಕ ಎತ್ತಿಸುವ ಕಾರ್ಯವನ್ನು ಹೆಚ್ಚುವರಿ ಪೊಲೀಸರು ಮಾಡುತ್ತಿದ್ದಾರೆ.

ಅದ್ಭುತವೆಂದರೆ, ಕೆಲವೇ ದಿನಗಳಲ್ಲಿ ಈ ಕಾರ್ಯಾಚರಣೆಯ ಪರಿಣಾಮವಾಗಿ ಹಲವಾರು ವಾಹನಗಳನ್ನು ಎತ್ತಿ, ವಾಹನ ಮಾಲೀಕರಿಗೆ ಕಠಿಣ ಸಂದೇಶವನ್ನು ರವಾನಿಸಲಾಗಿದೆ.

ಈ ಕಾರ್ಯಾಚರಣೆ ಕುರಿತು ಮಾತನಾಡಿದ ಮಂಗಳೂರಿನ ಡಿಸಿಪಿ (ಟ್ರಾಫಿಕ್) ಶ್ರೀಮತಿ ಅಶ್ವಿನಿ, “ನೋ-ಪಾರ್ಕಿಂಗ್ ನಿಯಮ ಉಲ್ಲಂಘನೆ ಮಾಡಿದವರು ಕಠಿಣ ದಂಡ ಅನುಭವಿಸಬೇಕು ಎಂಬುದು ನಮ್ಮ ಉದ್ದೇಶ. ಇದು ರಸ್ತೆಯ ಸುರಕ್ಷತೆ ಹಾಗೂ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಲು ಮುಖ್ಯವಾದ ಕ್ರಮವಾಗಿದೆ” ಎಂದು ಹೇಳಿದ್ದಾರೆ.

ಪೊಲೀಸರು ನೈತಿಕ ಜಾಗೃತಿಯನ್ನು ಕೂಡಾ ನಡೆಯಿಸುತ್ತಿದ್ದಾರೆ, ಸಾರ್ವಜನಿಕರು ನೋ-ಪಾರ್ಕಿಂಗ್ ಜಾಗಗಳಲ್ಲಿ ವಾಹನಗಳನ್ನು ನಿಲ್ಲಿಸದಂತೆ ವಿನಂತಿ ಮಾಡುತ್ತಿದ್ದು, ಈ ಕ್ರಮಗಳು ನಗರದ ಸಂಚಾರ ಪರಿಸ್ಥಿತಿಯನ್ನು ಸುಧಾರಿಸಲು ಸಹಕಾರಿಯಾಗಲಿದೆ.

 

ಬ್ರೇಕಿಂಗ್ ನ್ಯೂಸ್: ಪುಲಕೇಶಿನಗರ ಪೊಲೀಸರ ಯಶಸ್ವಿ ಕಾರ್ಯಾಚರಣೆ

ಪುಲಕೇಶಿನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ಸ್ಟೀಫನ್ ರಸ್ತೆಯಲ್ಲಿ ಫಿರಾದುದಾರರೊಬ್ಬರು ಮನೆಯ ಮುಂದೆ ನಿಲ್ಲಿಸಿದ್ದ ದ್ವಿ-ಚಕ್ರ ವಾಹನವನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುವುದಾಗಿ ದೂರು ದಾಖಲಿಸಿದ್ದಾರೆ. ಪುಲಕೇಶಿನಗರ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಯುತ್ತಿದೆ.

ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಭಾತ್ಮೀದಾರರಿಂದ ಖಚಿತವಾದ ಮಾಹಿತಿಯನ್ನು ಪಡೆದು, ದಿನಾಂಕ 09.06.2024 ರಂದು ಲಿಂಗರಾಜಪುರ ಬ್ರಿಡ್ಜ್ ಬಳಿ ಓರ್ವ ವ್ಯಕ್ತಿಯನ್ನು ಬೈಕ್ ಸಹಿತ ವಶಕ್ಕೆ ಪಡೆದುಕೊಂಡಿದ್ದಾರೆ. ನಂತರ ಈಸ್ಟ್ ರೈಲ್ವೇ ಸ್ಟೇಷನ್ ಬಳಿ ನಿಲ್ಲಿಸಿದ್ದ 3 ದ್ವಿ-ಚಕ್ರ ವಾಹನಗಳನ್ನು ಸಹ ವಶಕ್ಕೆ ಪಡೆದುಕೊಂಡಿದ್ದಾರೆ. ವಶಕ್ಕೆ ಪಡೆದ ದ್ವಿ-ಚಕ್ರ ವಾಹನಗಳ ಒಟ್ಟು ಮೌಲ್ಯ 2,95,000/- (ಎರಡು ಲಕ್ಷದ ತೊಂಬತ್ತೈದು ಸಾವಿರ ರೂಪಾಯಿ).

ನಂತರ ಆತನನ್ನು ದಿನಾಂಕ 10.06.2024 ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ.

ಈ ಕಾರ್ಯಾಚರಣೆಯನ್ನು ಪೂರ್ವ ವಿಭಾಗದ ಉಪ ಪೊಲೀಸ್‌ ಆಯುಕ್ತ ಶ್ರೀ ಕುಲದೀಪ್ ಕುಮಾರ್ ಆರ್ ಜೈನ್ ಮತ್ತು ಪುಲಕೇಶಿನಗರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶ್ರೀಮತಿ ಸಿ.ಆರ್. ಗೀತಾ ಅವರ ಮಾರ್ಗದರ್ಶನದಲ್ಲಿ, ಪುಲಕೇಶಿನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಶ್ರೀ ಗೋವಿಂದರಾಜು ಬಿ ಹಾಗೂ ಅಧಿಕಾರಿ/ಸಿಬ್ಬಂದಿ ತಂಡ ಯಶಸ್ವಿಯಾಗಿ ನಿರ್ವಹಿಸಿದೆ.

ಮೊಬೈಲ್ ಪೋನ್ ಕಳ್ಳತನ ಮಾಡಿದ್ದ ವ್ಯಕ್ತಿಗಳ ವಶ.

**7 ಲಕ್ಷ ಬೆಲೆ ಬಾಳುವ 20 ಮೊಬೈಲ್ ಫೋನ್‌ಗಳ ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿ**

ಹೆಚ್.ಎ.ಎಲ್ ಪೊಲೀಸ್ ಠಾಣಾ ಸರಹದ್ದಿನಲ್ಲಿ ದಿನಾಂಕ: 14.02.2024 ರಂದು ಪಿರಾದುದಾರರು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ಯಾರೋ ಅವರ ಮೊಬೈಲ್ ಫೋನ್ ಕಳ್ಳತನ ಮಾಡಿರುವ ಬಗ್ಗೆ ನೀಡಿದ ದೂರಿನ ಮೇರೆಗೆ, ಹೆಚ್.ಎ.ಎಲ್ ಪೊಲೀಸ್ ಠಾಣೆಯಲ್ಲಿ ಕಳುವು ಪ್ರಕರಣವನ್ನು ದಾಖಲಿಸಲಾಗಿದೆ.

ಈ ಪ್ರಕರಣದ ತನಿಖೆಯನ್ನು ಕೈಗೊಂಡ ಪೊಲೀಸರು, ಕೃತ್ಯದಲ್ಲಿ ಭಾಗಿಯಾಗಿದ್ದ ಇಬ್ಬರು ವ್ಯಕ್ತಿಗಳನ್ನು ದಿನಾಂಕ: 14.03.2024 ರಂದು ವಶಕ್ಕೆ ಪಡೆದಿದ್ದಾರೆ. ಅವರನ್ನು ವಿಚಾರಣೆಗೆ ಒಳಪಡಿಸಿದಾಗ, 7 ಲಕ್ಷ ರೂಪಾಯಿ ಮೌಲ್ಯದ ವಿವಿಧ ಕಂಪನಿಯ ಒಟ್ಟು 20 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇದರಲ್ಲಿ ಹೆಚ್.ಎ.ಎಲ್ ಪೊಲೀಸ್ ಠಾಣೆಗೆ ಸಂಬಂಧಿಸಿದ ಮೂರು ಪ್ರಕರಣಗಳನ್ನು ಪತ್ತೆಹಚ್ಚಿದ್ದಾರೆ.

ವಶಪಡಿಸಿಕೊಂಡ ವ್ಯಕ್ತಿಗಳನ್ನು ಸುದೀರ್ಘವಾಗಿ ವಿಚಾರಣೆಗೆ ಒಳಪಡಿಸಿದಾಗ, ಅವರು ಬೆಂಗಳೂರು ನಗರದ ಜನನಿಬೀಡ ಬಸ್ ನಿಲ್ದಾಣಗಳಲ್ಲಿ ಬಸ್‌ಗೆ ಹತ್ತಿ, ಬಸ್‌ನಲ್ಲಿ ನೂಕು-ನೊಗ್ಗಲು ಉಂಟುಮಾಡಿ, ಸಾರ್ವಜನಿಕರ ಬ್ಯಾಗ್‌ಗಳು ಮತ್ತು ಜೇಬಿನಲ್ಲಿರುವ ಮೊಬೈಲ್‌ಗಳನ್ನು ಕಳ್ಳತನ ಮಾಡುತ್ತಿದ್ದುದನ್ನು ಹೇಳಿಕೊಂಡಿದ್ದಾರೆ. ಮೊಬೈಲ್‌ಗಳ ಸಿಮ್ ಕಾರ್ಡ್‌ಗಳನ್ನು ತೆಗೆದು, ತಮ್ಮ ಬಳಿಯಲ್ಲಿಯೇ ಇಟ್ಟುಕೊಂಡು, ನಂತರ ತಮಗೆ ಪರಿಚಯವಿರುವ ಇಬ್ಬರು ವ್ಯಕ್ತಿಗಳಿಗೆ ಮಾರಾಟ ಮಾಡುತ್ತಿದ್ದರೆಂದು ತಿಳಿದುಬಂದಿದೆ. ಇವರುಗಳು ಸಾಫ್ಟ್‌ವೇರ್ ಪ್ರಯಾಣಿಕರನ್ನು ಗುರಿಯಾಗಿಸಿಕೊಂಡು ಕೃತ್ಯವ್ಯಸಗಿದ್ದರು.

ಈ ಕಾರ್ಯಾಚರಣೆಯನ್ನು ವೈಟ್‌ಫೀಲ್ಡ್ ವಿಭಾಗದ ಉಪ ಪೊಲೀಸ್ ಆಯುಕ್ತ ಡಾ. ಶಿವಕುಮಾರ್, ಐಪಿಎಸ್ ರವರ ಮಾರ್ಗದರ್ಶನದಲ್ಲಿ, ಶ್ರೀಮತಿ ಪ್ರಯದರ್ಶಿನಿ ಈಶ್ವರ್ ಸಾಣೆಕೊಪ್ಪ, ಸಹಾಯಕ ಪೊಲೀಸ್ ಆಯುಕ್ತರು, ಮಾರತ್‌ಹಳ್ಳಿ ಉಪ ವಿಭಾಗ ರವರ ನೇತೃತ್ವದಲ್ಲಿ, ಹೆಚ್.ಎ.ಎಲ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಅಧಿಕಾರಿ/ಸಿಬ್ಬಂದಿಗಳು ಯಶಸ್ವಿಯಾಗಿ ಬೇದಿಸಿದ್ದಾರೆ.