26 ಕೇಂದ್ರಗಳಲ್ಲಿ APC ನೇಮಕಾತಿ ಪರೀಕ್ಷೆ – ಕಟ್ಟುನಿಟ್ಟಿನ ತಪಾಸಣೆ

0

ತುಮಕೂರು ಜಿಲ್ಲೆಯಲ್ಲಿ ಇಂದು 26 ಪರೀಕ್ಷಾ ಕೇಂದ್ರಗಳಲ್ಲಿ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (APC) ನೇಮಕಾತಿ ಪರೀಕ್ಷೆ–2026 ಶಾಂತಿಯುತವಾಗಿ ಹಾಗೂ ಪಾರದರ್ಶಕವಾಗಿ ನಡೆಯಿತು.

ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮಗಳಿಗೆ ಅವಕಾಶ ನೀಡದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮಾರ್ಗಸೂಚಿಯಂತೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು.

ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕ ಅಶೋಕ್ ವೆಂಕಟ್, ಐಪಿಎಸ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ನೇರ ನೇತೃತ್ವದಲ್ಲಿ ಅಭ್ಯರ್ಥಿಗಳನ್ನು ಕೂಲಂಕುಷವಾಗಿ ತಪಾಸಣೆ (Frisking) ನಡೆಸಿ ಪರೀಕ್ಷಾ ಕೇಂದ್ರದೊಳಗೆ ಪ್ರವೇಶಿಸಲು ಅವಕಾಶ ನೀಡಲಾಯಿತು.

ಜಿಲ್ಲೆಯ ಎಲ್ಲಾ 26 ಪರೀಕ್ಷಾ ಕೇಂದ್ರಗಳಲ್ಲೂ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಪ್ರದೇಶಗಳಲ್ಲೂ ಸಾರ್ವಜನಿಕರ ಹಿತದೃಷ್ಟಿಯಿಂದ ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿತ್ತು.

ರೌಡಿಶೀಟರ್‌ಗಳ ಪರೇಡ್ – ಅಕ್ರಮ ಚಟುವಟಿಕೆಗಳಿಗೆ ಪೊಲೀಸರ ಖಡಕ್ ಎಚ್ಚರಿಕೆ!

0

ಡಿ.ಎ.ಆರ್. ಪರೇಡ್ ಮೈದಾನದಲ್ಲಿ ಇಂದು ರೌಡಿಶೀಟರ್‌ಗಳ ಪರೇಡ್ ನಡೆಸಲಾಯಿತು.ಈ ವೇಳೆ ರೌಡಿಶೀಟರ್‌ಗಳ ಪ್ರಸ್ತುತ ಚಟುವಟಿಕೆಗಳು ಹಾಗೂ ನಡವಳಿಕೆಗಳ ಕುರಿತು ಪರಿಶೀಲನೆ ನಡೆಸಲಾಯಿತು.

ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳಲ್ಲಿ ತೊಡಗದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಯಿತು.

ರೌಡಿಶೀಟರ್‌ಗಳ ಚಟುವಟಿಕೆಗಳ ಮೇಲೆ ನಿಗಾ ಮುಂದುವರಿಸುವುದರ ಜೊತೆಗೆ, ಕಾನೂನು ಉಲ್ಲಂಘನೆ ಕಂಡುಬಂದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಯಿತು.ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಪೊಲೀಸರ ಕಟ್ಟುನಿಟ್ಟಿನ ಕ್ರಮಗಳು ಮುಂದುವರಿಯಲಿವೆ

ನೈರುತ್ಯ ವಿಭಾಗದ ಪೊಲೀಸರಿಗೆ ತನಿಖಾ ಕೌಶಲ್ಯ ತರಬೇತಿ

0

ನೈರುತ್ಯ ವಿಭಾಗದ ಪೊಲೀಸ್ ಠಾಣೆಗಳ ಅಧಿಕಾರಿ ಹಾಗೂ ಸಿಬ್ಬಂದಿಯವರಿಗೆ ತನಿಖಾ ಕೌಶಲ್ಯ ಮತ್ತು ತನಿಖಾ ವಿಮರ್ಶೆ ಕುರಿತು ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು.ಕಾರ್ಯಾಗಾರದಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗದ ಡಿವೈಎಸ್ಪಿ ಸುದೀರ್ ಎಂ. ಹೆಗ್ಡೆ ಹಾಗೂ ಹಿರಿಯ ಸರ್ಕಾರಿ ಅಭಿಯೋಜಕ ಮುನಿರಾಜು ಅವರು ತರಬೇತಿ ನೀಡಿದರು.

ತನಿಖೆಯ ಸಂದರ್ಭದಲ್ಲಿ ಅನುಸರಿಸಬೇಕಾದ ಕಾನೂನು ಮಾರ್ಗಸೂಚಿಗಳು, ತನಿಖೆಯ ಗುಣಮಟ್ಟ ಹೆಚ್ಚಿಸುವ ಕ್ರಮಗಳು ಹಾಗೂ POCSO ಕಾಯ್ದೆಯಡಿ ಪ್ರಕರಣಗಳ ತನಿಖೆಯ ಪ್ರಮುಖ ಅಂಶಗಳ ಕುರಿತು ಅಧಿಕಾರಿಗಳು ವಿವರಿಸಿದರು.

ವಿಶೇಷವಾಗಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಮಕ್ಕಳೊಂದಿಗೆ ಸಂವೇದನಾಶೀಲವಾಗಿ ವರ್ತಿಸುವುದು, ಸಂತ್ರಸ್ತರ ಹೇಳಿಕೆಗಳನ್ನು ಕಾನೂನುಬದ್ಧವಾಗಿ ದಾಖಲಿಸುವುದು ಹಾಗೂ ಸಾಕ್ಷ್ಯಾಧಾರಗಳನ್ನು ವೈಜ್ಞಾನಿಕವಾಗಿ ಸಂಗ್ರಹಿಸುವುದು ಸೇರಿದಂತೆ ತನಿಖೆಯ ವಿವಿಧ ಹಂತಗಳ ಕುರಿತು ಮಾರ್ಗದರ್ಶನ ನೀಡಲಾಯಿತು.

ವೈದ್ಯಕೀಯ ಮತ್ತು ವೈಜ್ಞಾನಿಕ ಸಾಕ್ಷ್ಯಗಳನ್ನು ಸಮರ್ಪಕವಾಗಿ ಪರಿಗಣಿಸುವುದು ಹಾಗೂ ಪ್ರಕರಣಗಳ ತನಿಖೆಯನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಕುರಿತು ಕೂಡ ತರಬೇತಿ ನೀಡಲಾಯಿತು.

ಈ ತರಬೇತಿ ಕಾರ್ಯಾಗಾರವು ನೈರುತ್ಯ ವಿಭಾಗದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರ ಕಾನೂನು ಜ್ಞಾನ, ತನಿಖಾ ಕೌಶಲ್ಯ ಮತ್ತು ವೃತ್ತಿಪರ ಸಾಮರ್ಥ್ಯ ವೃದ್ಧಿಗೆ ಸಹಕಾರಿಯಾಯಿತು.

ಪೊಲೀಸ್ ಡ್ಯೂಟಿ ಮೀಟ್‌ನಲ್ಲಿ ತುಮಕೂರು ಪೊಲೀಸರ ತ್ರಿವಿಕ್ರಮ ಸಾಧನೆ!

0

8ನೇ ಸೆಂಟ್ರಲ್ ರೇಂಜ್ ಪೊಲೀಸ್ ಡ್ಯೂಟಿ ಮೀಟ್–2026ರಲ್ಲಿ ತುಮಕೂರು ಜಿಲ್ಲಾ ಪೊಲೀಸ್‌ಗೆ ಭರ್ಜರಿ ಸಾಧನೆ.ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ತುಮಕೂರು ಜಿಲ್ಲಾ ಪೊಲೀಸ್‌ ತಂಡ ಒಟ್ಟು 5 ಪದಕಗಳನ್ನು ತನ್ನದಾಗಿಸಿಕೊಂಡಿದೆ.

ವೈಜ್ಞಾನಿಕ ತನಿಖಾ ಸಹಾಯ ಸ್ಪರ್ಧೆಯಲ್ಲಿ ಚೇಳೂರು ಪೊಲೀಸ್ ಠಾಣೆಯ CPC 965 ದೀಪಕ್ ಅವರು ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕಕ್ಕೆ ಭಾಜನರಾಗಿದ್ದಾರೆ.

ಪೊಲೀಸ್ ಛಾಯಾಗ್ರಹಣ ಸ್ಪರ್ಧೆಯಲ್ಲಿಗುಬ್ಬಿ ಸರ್ಕಲ್ ಕಚೇರಿಯ CPC 819 ಮಧುಸೂಧನ್ ಕೆ. ಅವರು ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗೆದ್ದಿದ್ದಾರೆ.

ಇನ್ನು ಕಂಪ್ಯೂಟರ್ ಅರಿವು ಸ್ಪರ್ಧೆಯಲ್ಲಿತಿಲಕ್‌ಪಾರ್ಕ್ ಪೊಲೀಸ್ ಠಾಣೆಯ CPC 1024 ಅಂಬರೀಶ್ ಅವರು ತೃತೀಯ ಸ್ಥಾನ ಪಡೆದು ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ.

ಇದರ ಜೊತೆಗೆ ಶ್ವಾನ ದಳದ ಸ್ಪರ್ಧೆಯಲ್ಲೂ ತುಮಕೂರು ಜಿಲ್ಲಾ ಪೊಲೀಸ್‌ ತಂಡ ಮಿಂಚಿದೆ.Explosive Dog ವಿಭಾಗದಲ್ಲಿ Labrador ತಳಿಯ Max ಕಂಚಿನ ಪದಕ ಪಡೆದಿದ್ದು, ಹ್ಯಾಂಡ್ಲರ್‌ಗಳಾದ APC 115 ಪವನ ಕಲ್ಯಾಣ್ ಹಾಗೂ APC 104 ಉಮೇಶ್ ಅವರ ತಂಡ ಅತ್ಯುತ್ತಮ ಪ್ರದರ್ಶನ ನೀಡಿದೆ.

Crime Dog ವಿಭಾಗದಲ್ಲಿ Belgian Malinois ತಳಿಯ Rockey ಕಂಚಿನ ಪದಕ ಪಡೆದಿದ್ದು, ಹ್ಯಾಂಡ್ಲರ್‌ಗಳಾದ APC 189 ವೆಂಕಟೇಶ ಹಾಗೂ APC 86 ಸುನೀಲ ಅವರ ತಂಡ ಗಮನಾರ್ಹ ಸಾಧನೆ ಮಾಡಿದೆ.ಪೊಲೀಸ್ ಕರ್ತವ್ಯ, ಕೌಶಲ್ಯ ಮತ್ತು ಶ್ವಾನ ದಳದ ಅತ್ಯುತ್ತಮ ಪ್ರದರ್ಶನದ ಮೂಲಕ 8ನೇ ಸೆಂಟ್ರಲ್ ರೇಂಜ್ ಪೊಲೀಸ್ ಡ್ಯೂಟಿ ಮೀಟ್–2026ರಲ್ಲಿ ತುಮಕೂರು ಜಿಲ್ಲಾ ಪೊಲೀಸ್‌ ತಂಡ ಹೆಮ್ಮೆ ಮೂಡಿಸಿದೆ.

ಯಾದಗಿರಿ ಪೊಲೀಸರ ಅದ್ಭುತ ಸಾಧನೆ: 14 ಸ್ಪರ್ಧೆಗಳಲ್ಲಿ ಪ್ರಶಸ್ತಿ!

0

ಕಲಬುರಗಿ ನಗರದಲ್ಲಿ ಕಳೆದ ಎರಡು ದಿನಗಳಿಂದ ನಡೆದ ಪೊಲೀಸ್ ಕರ್ತವ್ಯಕೂಟದಲ್ಲಿ ಯಾದಗಿರಿ ಜಿಲ್ಲಾ ಪೊಲೀಸ್ ತಂಡವು ಗಮನಾರ್ಹ ಸಾಧನೆ ಮಾಡಿದೆ.

ಕರ್ತವ್ಯಕೂಟದ ವಿವಿಧ ವಿಭಾಗಗಳಲ್ಲಿ ಯಾದಗಿರಿ ಜಿಲ್ಲೆಯಿಂದ ಭಾಗವಹಿಸಿದ್ದ ಅಧಿಕಾರಿ ಹಾಗೂ ಸಿಬ್ಬಂದಿ ಸುಮಾರು 14 ವಿವಿಧ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡು, ತಮ್ಮ ಕರ್ತವ್ಯ ಕೌಶಲ್ಯ, ಸಾಮರ್ಥ್ಯ ಹಾಗೂ ಪ್ರತಿಭೆಯನ್ನು ಅತ್ಯುತ್ತಮವಾಗಿ ಪ್ರದರ್ಶಿಸಿದ್ದಾರೆ.

ವಿವಿಧ ಸ್ಪರ್ಧೆಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ಯಾದಗಿರಿ ಜಿಲ್ಲಾ ಪೊಲೀಸ್ ತಂಡದ ಅಧಿಕಾರಿ ಹಾಗೂ ಸಿಬ್ಬಂದಿ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡು ವಿಜೇತರಾಗಿದ್ದಾರೆ.

ಸ್ಪರ್ಧೆಗಳಲ್ಲಿ ತೋರಿದ ಅತ್ಯುತ್ತಮ ಪ್ರದರ್ಶನ ಹಾಗೂ ಸಾಧನೆಗೆ ಯಾದಗಿರಿ ಜಿಲ್ಲಾ ಪೊಲೀಸ್ ತಂಡಕ್ಕೆ ಮೆಚ್ಚುಗೆ ವ್ಯಕ್ತವಾಗಿದ್ದು, ವಿಜೇತರಾದವರು ಹಾಗೂ ಸ್ಪರ್ಧೆಗಳಲ್ಲಿ ಭಾಗವಹಿಸಿದ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗೆ ಹೃತ್ಪೂರ್ವಕ ಅಭಿನಂದನೆಗಳು ಸಲ್ಲಿವೆ.

ಕರ್ತವ್ಯಕೂಟದ ವಿಜೇತರಿಗೆ ಗೌರವ.. ಎಸ್. ಗಿರೀಶ್ ಅವರಿಂದ ಪ್ರಶಸ್ತಿ ಪ್ರದಾನ

0

ಪೊಲೀಸ್ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಯ ವೃತ್ತಿಪರ ಕೌಶಲ್ಯ, ಕರ್ತವ್ಯನಿಷ್ಠೆ, ದೈಹಿಕ ಸಾಮರ್ಥ್ಯ ಹಾಗೂ ವಿವಿಧ ಕ್ಷೇತ್ರಗಳಲ್ಲಿನ ಪರಿಣತಿಯನ್ನು ಪ್ರದರ್ಶಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಕೇಂದ್ರ ವಲಯ ಮಟ್ಟದ 8ನೇ ಪೊಲೀಸ್ ಕರ್ತವ್ಯಕೂಟದಲ್ಲಿ ವಿವಿಧ ವಿಭಾಗಗಳ ಸ್ಪರ್ಧೆಗಳು ಯಶಸ್ವಿಯಾಗಿ ನಡೆಯಿತು.

ಕರ್ತವ್ಯಕೂಟದಲ್ಲಿ ಕೇಂದ್ರ ವಲಯದ ವಿವಿಧ ಘಟಕಗಳಿಂದ ಅಧಿಕಾರಿ ಹಾಗೂ ಸಿಬ್ಬಂದಿ ಉತ್ಸಾಹದಿಂದ ಭಾಗವಹಿಸಿ, ತಮ್ಮ ಪ್ರತಿಭೆ ಹಾಗೂ ಕರ್ತವ್ಯ ಕೌಶಲ್ಯವನ್ನು ಅನಾವರಣಗೊಳಿಸಿದರು.

ಈ ಕಾರ್ಯಕ್ರಮದಲ್ಲಿ ಕೇಂದ್ರ ವಲಯದ ಆರಕ್ಷಕ ಉಪ ಮಹಾನಿರೀಕ್ಷಕ ಎಸ್. ಗಿರೀಶ್, ಐ.ಪಿ.ಎಸ್. ಅವರು ಭಾಗವಹಿಸಿ, ಕರ್ತವ್ಯಕೂಟದ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ವಿಜೇತರಾದ ಅಧಿಕಾರಿ ಹಾಗೂ ಸಿಬ್ಬಂದಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಸ್ಪರ್ಧೆಗಳಲ್ಲಿ ವಿಜೇತರಾದ ಅಧಿಕಾರಿ ಹಾಗೂ ಸಿಬ್ಬಂದಿಯ ಸಾಧನೆಯನ್ನು ಶ್ಲಾಘಿಸಿದ ಅವರು, ಅವರ ಪರಿಶ್ರಮ, ಶಿಸ್ತು, ಕರ್ತವ್ಯನಿಷ್ಠೆ ಹಾಗೂ ಸ್ಪರ್ಧಾತ್ಮಕ ಮನೋಭಾವವನ್ನು ಅಭಿನಂದಿಸಿದರು.

ಪೊಲೀಸ್ ಕರ್ತವ್ಯದಲ್ಲಿ ನಿರಂತರವಾಗಿ ಹೊಸ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು, ವೃತ್ತಿಪರ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವುದು ಹಾಗೂ ಸವಾಲಿನ ಸಂದರ್ಭಗಳನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಇಂತಹ ಕರ್ತವ್ಯಕೂಟಗಳು ಮಹತ್ವದ ವೇದಿಕೆಯಾಗಿವೆ ಎಂದು ತಿಳಿಸಿದರು.

ವಿವಿಧ ವಿಭಾಗಗಳಲ್ಲಿ ವಿಜೇತರಾದ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಿದ ಎಸ್. ಗಿರೀಶ್, ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ಉತ್ಸಾಹ ಹಾಗೂ ಬದ್ಧತೆಯೊಂದಿಗೆ ಕರ್ತವ್ಯ ನಿರ್ವಹಿಸಿ, ಇಲಾಖೆಯ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸುವಂತೆ ಶುಭ ಹಾರೈಸಿದರು.

ಬೆಂಗಳೂರಿನಲ್ಲಿ ಬಾಂಗ್ಲಾ ನೆಲೆಗಳ ಮೇಲೆ ಪೊಲೀಸ್ ಬೇಟೆ…!

0

ಬೆಂಗಳೂರು ಮಹಾನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಗಳ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.ಎಲೆಕ್ಟ್ರಾನ್ ಸಿಟಿ ವಿಭಾಗದ ಡಿಸಿಪಿ ನಾರಾಯಣ್ ಅವರ ನಿರ್ದೇಶನದಂತೆ, ಎಲೆಕ್ಟ್ರಾನ್ ಸಿಟಿ ಉಪ ವಿಭಾಗದ ಎಸಿಪಿ ಕೆ.ಎನ್. ಸತೀಶ್ ಅವರ ಮಾರ್ಗದರ್ಶನದಲ್ಲಿ ಬೇಗೂರು ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂದೀಪ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.ಬೆಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಗಳನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಬಳಿಕ ಅಗತ್ಯ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ, ಅವರನ್ನು ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ.

ಯಾವ್ಯಾವ ಠಾಣೆಗಳ ವ್ಯಾಪ್ತಿಯಲ್ಲಿ ಪತ್ತೆ?

ಅಕ್ರಮ ವಲಸಿಗರ ಪತ್ತೆ ಕಾರ್ಯಾಚರಣೆಯಲ್ಲಿ ಹಲವು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನೆಲೆಸಿದ್ದವರನ್ನು ವಶಕ್ಕೆ ಪಡೆಯಲಾಗಿದೆ. ಬೇಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 9 ಮಂದಿ, ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 12 ಮಂದಿ ಬೊಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ಜಿಗಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ,ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು.. ಇದರ ಜೊತೆಗೆ, ಬಂಡೆಪಾಳ್ಯ, ಹುಳಿಮಾವು, ಹೆಣ್ಣೂರು ಹಾಗೂ ನಂದಗುಡಿ ಪೊಲೀಸ್ ಠಾಣೆಗಳ ವ್ಯಾಪ್ತಿಯಿಂದ ತಲಾ ಒಬ್ಬರಂತೆ ಬಾಂಗ್ಲಾದೇಶದ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿದೆ. ಇದರೊಂದಿಗೆ ಸುಮಾರು 40ಕ್ಕೂ ಹೆಚ್ಚು ಬಾಂಗ್ಲಾ ಪ್ರಜೆಗಳನ್ನ ಪೊಲೀಸರು ವಶಕ್ಕೆ ಪಡೆದು ಬಿಎಸ್‌ಎಫ್‌ಗೆ  ಹಸ್ತಾಂತರಿಸಿದ್ದಾರೆ.

ಬೆಂಗಳೂರು ಯಾವ ಏರಿಯಾಗಳಲ್ಲಿ ನೆಲೆಸಿದ್ದರು?

ಬಾಂಗ್ಲಾದೇಶದಿಂದ ಅಕ್ರಮವಾಗಿ ಭಾರತ ಪ್ರವೇಶಿಸಿದ ಬಳಿಕ ಈ ಮಂದಿ ಬೆಂಗಳೂರಿನ ವಿವಿಧ ಭಾಗಗಳಲ್ಲಿ ನೆಲೆಸಿದ್ದರು ಎನ್ನಲಾಗಿದೆ.ವಿಶೇಷವಾಗಿ ಎಲೆಕ್ಟ್ರಾನ್ ಸಿಟಿ, ಬೇಗೂರು, ಪರಪ್ಪನ ಅಗ್ರಹಾರ, ಬೊಮ್ಮನಹಳ್ಳಿ, ಜಿಗಣಿ ಸೇರಿದಂತೆ ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಇವರ ವಾಸದ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು.ಆದರೆ ಇವರು ನಿಖರವಾಗಿ ಯಾವ ಪ್ರದೇಶದಲ್ಲಿ, ಯಾವ ವಿಳಾಸದಲ್ಲಿ ಹಾಗೂ ಎಷ್ಟು ದಿನಗಳಿಂದ ವಾಸವಾಗಿದ್ದರು ಎಂಬುದರ ಕುರಿತು ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ಹೊರಬರಬೇಕಿದೆ.

ಬೆಂಗಳೂರಿನಲ್ಲಿ ಏನು ಕೆಲಸ ಮಾಡುತ್ತಿದ್ದರು?

ಇನ್ನು ಅಕ್ರಮವಾಗಿ ನೆಲೆಸಿದ್ದ ಈ ಬಾಂಗ್ಲಾದೇಶದ ಪ್ರಜೆಗಳು ಬೆಂಗಳೂರಿನಲ್ಲಿ ಯಾವ ರೀತಿಯ ಉದ್ಯೋಗ ಮಾಡುತ್ತಿದ್ದರು ಎಂಬುದೂ ಇದೀಗ ತನಿಖೆಯ ಪ್ರಮುಖ ಅಂಶವಾಗಿದೆ.ಕಟ್ಟಡ ನಿರ್ಮಾಣ ಕೆಲಸ, ದಿನಗೂಲಿ, ಗೃಹ ಕೆಲಸ, ಕಾರ್ಖಾನೆ ಅಥವಾ ಇತರೆ ಅಸಂಘಟಿತ ವಲಯಗಳಲ್ಲಿ ಕೆಲಸ ಮಾಡುತ್ತಿದ್ದರೇ?ಅಥವಾ,ಬಾಂಗ್ಲಾದೇಶದಿಂದ ಬಂದು ಬೆಂಗಳೂರಿನಲ್ಲಿ ನಿರ್ದಿಷ್ಟ ಉದ್ಯೋಗದ ಹೆಸರಿನಲ್ಲಿ ನೆಲೆಸಿದ್ದರೇ? ಎಂಬುದರ ಬಗ್ಗೆ ಪೊಲೀಸರು ಪರಿಶೀಲನೆ ನಡೆಸಬೇಕಿದೆ.‘ಈ ಕುರಿತ ಸಂಪೂರ್ಣ ಮಾಹಿತಿ ತನಿಖೆ ಬಳಿಕವೇ ಸ್ಪಷ್ಟವಾಗಲಿದೆ.

ಬಾಡಿಗೆ ಮನೆನಾ? ಶೆಡ್‌ಗಳಲ್ಲೇ ವಾಸ?

ಇನ್ನೊಂದು ಪ್ರಮುಖ ಪ್ರಶ್ನೆಏನಪ್ಪ ಅಂದ್ರೆ ಬೆಂಗಳೂರಿಗೆ ಬಂದಿದ್ದ ಈ ಮಂದಿ ಬಾಡಿಗೆ ಮನೆಗಳಲ್ಲಿ ವಾಸವಾಗಿದ್ದರೇ? ಅಥವಾ ನಿರ್ಮಾಣ ಹಂತದ ಕಟ್ಟಡಗಳು, ಶೆಡ್‌ಗಳು ಹಾಗೂ ಕಾರ್ಮಿಕರ ವಸತಿ ಪ್ರದೇಶಗಳಲ್ಲಿ ನೆಲೆಸಿದ್ದರೇ?ಅವರ ವಾಸದ ಸ್ಥಳಗಳ ಕುರಿತು ಪೊಲೀಸರು ಪರಿಶೀಲನೆ ನಡೆಸಿದ್ದು, ಮನೆ ಮಾಲೀಕರು, ಕಟ್ಟಡ ಮಾಲೀಕರು ಹಾಗೂ ಮಧ್ಯವರ್ತಿಗಳ ಪಾತ್ರವೂ ತನಿಖೆಯ ವ್ಯಾಪ್ತಿಗೆ ಬರಬಹುದಾಗಿದೆ.ಅಕ್ರಮ ವಲಸಿಗರಿಗೆ ಬಾಡಿಗೆ ಮನೆ ನೀಡುವ ಮುನ್ನ ದಾಖಲೆಗಳ ಪರಿಶೀಲನೆ ನಡೆದಿತ್ತೇ ಎಂಬ ಪ್ರಶ್ನೆಯೂ ಇದೀಗ ಮುನ್ನೆಲೆಗೆ ಬಂದಿದೆ.ಹೀಗಾಗಿ ಈ ಎಲ್ಲಾ ಪ್ರಶ್ನೆಗಳಿಗೆ ತನಿಖೆಯಿಂದ ಉತ್ತರ ಸಿಗಬೇಕಿದೆ.ಅಕ್ರಮ ವಲಸಿಗರ ಪತ್ತೆಯೊಂದಿಗೆ, ಬೆಂಗಳೂರಿನಲ್ಲಿ ಇವರಿಗೆ ಆಶ್ರಯ ನೀಡಿದವರು ಹಾಗೂ ನೆರವಾದವರ ಮೇಲೂ ಪೊಲೀಸರು ಕಣ್ಣಿಟ್ಟಿದ್ದಾರೆ.

ತಂತ್ರಜ್ಞಾನಾಧಾರಿತ ಪೊಲೀಸ್ ವ್ಯವಸ್ಥೆಗೆ ನಾವೀನ್ಯತಾ ಕೇಂದ್ರ-ಪ್ರಿಯಾಂಕ್‌ ಖರ್ಗೆ

0

ಭವಿಷ್ಯಕ್ಕೆ ಸಿದ್ಧವಾದ ನಗರ ಪೊಲೀಸ್ ವ್ಯವಸ್ಥೆಯನ್ನು ನಿರ್ಮಿಸುವ ನಿಟ್ಟಿನಲ್ಲಿ ಗೃಹ ಇಲಾಖೆಯಿಂದ ವಿಶೇಷ ನಾವೀನ್ಯತಾ ಕೇಂದ್ರ ಸ್ಥಾಪಿಸಲಾಗುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಸೈಬರ್ ಭದ್ರತೆಗೆ ಮಾತ್ರ ಸೀಮಿತವಾಗದೆ, ಅಪರಾಧ ತಡೆ ಮತ್ತು ತನಿಖೆ, ಸಂಚಾರ ಹಾಗೂ ಚಲನಶೀಲತೆ ನಿರ್ವಹಣೆ, ಗುಪ್ತಚರ ಮಾಹಿತಿ, ಸಂಪನ್ಮೂಲಗಳ ನಿಯೋಜನೆ, ನಗರ ಯೋಜನೆ ಮತ್ತು ನಾಗರಿಕ ಸೇವೆಗಳಲ್ಲಿ ತಂತ್ರಜ್ಞಾನ, ದತ್ತಾಂಶ ಹಾಗೂ ನಾವೀನ್ಯತೆಯ ಪರಿಣಾಮಕಾರಿ ಬಳಕೆಗೆ ಈ ಕೇಂದ್ರ ಒತ್ತು ನೀಡಲಿದೆ.

ನಗರಗಳು ವೇಗವಾಗಿ ಬೆಳೆಯುತ್ತಿರುವಂತೆ, ಪೊಲೀಸ್ ವ್ಯವಸ್ಥೆಯೂ ಹೊಸ ಸವಾಲುಗಳಿಗೆ ತಕ್ಕಂತೆ ಬದಲಾಗಬೇಕಿದೆ.

ಸ್ಮಾರ್ಟ್ ಹಾಗೂ ದತ್ತಾಂಶ ಆಧಾರಿತ ನಿರ್ಧಾರ ಕೈಗೊಳ್ಳುವಿಕೆ, ಭವಿಷ್ಯದ ಸವಾಲುಗಳನ್ನು ಮುಂಚಿತವಾಗಿ ಗುರುತಿಸುವುದು ಮತ್ತು ನಾಳೆಯ ನಗರಗಳ ಅಗತ್ಯಗಳಿಗೆ ತಕ್ಕ ತಂತ್ರಜ್ಞಾನ ಹಾಗೂ ಕೌಶಲ್ಯಗಳನ್ನು ಪೊಲೀಸ್ ಪಡೆಗೆ ಒದಗಿಸುವುದು ಈ ನಾವೀನ್ಯತಾ ಕೇಂದ್ರದ ಪ್ರಮುಖ ಉದ್ದೇಶವಾಗಿದೆ.

69 ಪೊಲೀಸ್ ಇನ್ಸ್‌ಪೆಕ್ಟರ್‌ಗಳ ಸ್ಥಳ ನಿಯುಕ್ತಿ: ರಾಜ್ಯ ಪೊಲೀಸ್ ಇಲಾಖೆಯಿಂದ ಆದೇಶ

0

ಪೊಲೀಸ್ ಸಿಬ್ಬಂದಿ ಮಂಡಳಿಯು ದಿನಾಂಕ 29-08-2026ರಂದು ಕೈಗೊಂಡ ನಿರ್ಣಯದಂತೆ, ಪೊಲೀಸ್ ಇನ್ಸ್‌ಪೆಕ್ಟರ್‌ಗಳ ಸ್ಥಳ ನಿಯುಕ್ತಿಗೆ ಸಂಬಂಧಿಸಿದಂತೆ ಡಿಜಿ ಮತ್ತು ಐಜಿಪಿ ಕಚೇರಿಯಿಂದ ದಿನಾಂಕ 01-09-2026ರಂದು ಆದೇಶ ಹೊರಡಿಸಲಾಗಿದೆ.

ಈ ಆದೇಶದನ್ವಯ ಒಟ್ಟು 69 ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು ರಾಜ್ಯದ ವಿವಿಧ ಪೊಲೀಸ್ ಘಟಕಗಳು ಹಾಗೂ ವಿಭಾಗಗಳಿಗೆ ವರ್ಗಾವಣೆ ಮತ್ತು ಸ್ಥಳ ನಿಯುಕ್ತಿಗೊಳಿಸಲಾಗಿದೆ.

ಕರ್ನಾಟಕ ಲೋಕಾಯುಕ್ತ, ಸಿಐಡಿ, ರಾಜ್ಯ ಗುಪ್ತವಾರ್ತೆ, ಆಂತರಿಕ ಭದ್ರತಾ ವಿಭಾಗ, ಡಿಸಿಆರ್‌ಇ, ಸಿಸಿಬಿ ಸೇರಿದಂತೆ ವಿವಿಧ ಪ್ರಮುಖ ಘಟಕಗಳಿಗೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಇದರ ಜೊತೆಗೆ ಬೆಂಗಳೂರು ನಗರ, ಮೈಸೂರು, ದಾವಣಗೆರೆ, ಬಳ್ಳಾರಿ, ಬಾಗಲಕೋಟೆ, ಬೀದರ್, ಉತ್ತರ ಕನ್ನಡ, ಕಲಬುರಗಿ, ಚಿತ್ರದುರ್ಗ, ವಿಜಯಪುರ, ದಕ್ಷಿಣ ಕನ್ನಡ, ಶಿವಮೊಗ್ಗ, ಕೊಪ್ಪಳ ಸೇರಿದಂತೆ ವಿವಿಧ ಜಿಲ್ಲೆಗಳ ಪೊಲೀಸ್ ಘಟಕಗಳಿಗೂ ಇನ್ಸ್‌ಪೆಕ್ಟರ್‌ಗಳನ್ನು ನಿಯುಕ್ತಿಗೊಳಿಸಲಾಗಿದೆ.

ಆದೇಶದಲ್ಲಿರುವ ಅಧಿಕಾರಿಗಳನ್ನು ಸಂಬಂಧಪಟ್ಟ ಘಟಕಾಧಿಕಾರಿಗಳು ತಕ್ಷಣ ಕರ್ತವ್ಯದಿಂದ ಬಿಡುಗಡೆಗೊಳಿಸಿ, ಯಾವುದೇ ಸೇರುವಿಕೆ ಕಾಲವನ್ನು ಬಳಸಿಕೊಳ್ಳದೆ ನಿಯುಕ್ತಿಗೊಳಿಸಲಾದ ಸ್ಥಳದಲ್ಲಿ ಕೂಡಲೇ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.

ಅಧಿಕಾರಿಗಳು ಕರ್ತವ್ಯಕ್ಕೆ ಹಾಜರಾದ ಕುರಿತು ಪಾಲನಾ ವರದಿಯನ್ನು ಪೊಲೀಸ್ ಪ್ರಧಾನ ಕಚೇರಿಗೆ ಸಲ್ಲಿಸುವಂತೆಯೂ ಆದೇಶದಲ್ಲಿ ತಿಳಿಸಲಾಗಿದೆ.

ರಾಜ್ಯ ಪೊಲೀಸ್ ಇಲಾಖೆಯ ವಿವಿಧ ಘಟಕಗಳ ಕಾರ್ಯಚಟುವಟಿಕೆಗಳನ್ನು ಮತ್ತಷ್ಟು ಪರಿಣಾಮಕಾರಿಗೊಳಿಸುವ ನಿಟ್ಟಿನಲ್ಲಿ ಈ ಸ್ಥಳ ನಿಯುಕ್ತಿ ಆದೇಶ ಮಹತ್ವ ಪಡೆದಿದೆ.

ವಾರಸುದಾರರಿಲ್ಲದ 12 ದ್ವಿಚಕ್ರ ವಾಹನಗಳ ಹರಾಜು

0

ಶಿವಮೊಗ್ಗ ಜಿಲ್ಲೆಯ ಆನಂದಪುರ ಪೊಲೀಸ್ ಠಾಣೆ ಆವರಣದಲ್ಲಿ ಹಲವು ದಿನಗಳಿಂದ ವಾರಸುದಾರರು ಬಿಡಿಸಿಕೊಂಡು ಹೋಗದೇ ಉಳಿದಿದ್ದ ದ್ವಿಚಕ್ರ ವಾಹನಗಳ ವಿಲೇವಾರಿಗೆ ಕ್ರಮ ಕೈಗೊಳ್ಳಲಾಗಿದೆ.

ಮಾನ್ಯ ನ್ಯಾಯಾಲಯದ ಆದೇಶದ ಮೇರೆಗೆ, ಠಾಣೆಯಲ್ಲಿ ಸಂಗ್ರಹವಾಗಿದ್ದ ಒಟ್ಟು 12 ದ್ವಿಚಕ್ರ ವಾಹನಗಳ ಹರಾಜು ಪ್ರಕ್ರಿಯೆಯನ್ನು ನಿಯಮಾನುಸಾರ ಪೂರ್ಣಗೊಳಿಸಲಾಗಿದೆ.

ನ್ಯಾಯಾಲಯದ ಆದೇಶದಂತೆ ವಾಹನಗಳ ವಿಲೇವಾರಿ ಮಾಡುವ ಮೂಲಕ ಠಾಣಾ ಆವರಣದಲ್ಲಿ ಅನಗತ್ಯವಾಗಿ ನಿಲ್ಲಿಸಿದ್ದ ವಾಹನಗಳಿಗೆ ಮುಕ್ತಿ ನೀಡಲಾಗಿದೆ.