







































ಕರ್ನಾಟಕ ರಾಜ್ಯಕ್ಕೆ ನೇಮಕವಾಗಿರುವ 2024ನೇ ಬ್ಯಾಚ್ನ ಪ್ರೊಬೆಷನರಿ ಐ.ಪಿ.ಎಸ್ ಅಧಿಕಾರಿಗಳು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸೌಧದಲ್ಲಿ ಭೇಟಿಯಾದರು. ಈ ವೇಳೆ ಮಹತ್ತರ ಜವಾಬ್ದಾರಿ ಹೊತ್ತು ವೃತ್ತಿ ಜೀವನಕ್ಕೆ ಕಾಲಿಡುತ್ತಿರುವ ಈ ಎಲ್ಲಾ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಅಭಿನಂದಿಸಿ, ಶುಭ ಹಾರೈಸಿದರು.
ರಾಜ್ಯ ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಅಂಜುಂ ಪರ್ವೇಜ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕಾದ ಎಂ.ಎ.ಸಲೀಂ, ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ರವಿ ಅವರು ಈ ವೇಳೆ ಉಪಸ್ಥಿತರಿದ್ದರು.




ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆ ಕೇಂದ್ರ ಸ್ಥಾನಕ್ಕೆ ಭೇಟಿ ನೀಡಿ ನಂತರ ಡಿ ಎ ಆರ್ ಕೇಂದ್ರಸ್ಥಾನದ ಆವರಣದಲ್ಲಿ ಚಾಮರಾಜನಗರ ಗೃಹರಕ್ಷಕ ದಳ ವತಿಯಿಂದ ಆಯೋಜಿಸಿದ ‘ಜಿಲ್ಲಾ ಮಟ್ಟದ ವೃತ್ತಿಪರ ಹಾಗೂ ಕ್ರೀಡಾಕೂಟ-2025’ ರ ಸಮಾರೋಪ ಕಾರ್ಯಕ್ರಮ




ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ಚಳಗೇರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಪಿಎಸ್ಐ ಕುಷ್ಟಗಿ ರವರು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ, ಸಂಚಾರಿ ನಿಯಮಗಳು, ಸೈಬರ್ ಕ್ರೈಂ 112 ಮತ್ತು 1930 ಬಗ್ಗೆ ಮಾಹಿತಿಯನ್ನು ನೀಡಲಾಯಿತು.




ಸರ್ದಾರ್ ವಲ್ಲಭಬಾಯ್ ಪಟೇಲ್ ರವರ 150ನೇ ಜನ್ಮದಿನಾಚರಣೆಯ ಅಂಗವಾಗಿ, ರಾಷ್ಟ್ರೀಯ ಏಕತಾ ದಿನವನ್ನು ಆಚರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವತಿಯಿಂದ ಚಿಕ್ಕಬಳ್ಳಾಪುರ ನಗರದ ಕನ್ನಡ ಭವನದಿಂದ ಏಕತಾ ಓಟವನ್ನು (“Run for unity”) ಹಮ್ಮಿಕೊಂಡಿದ್ದು, ಜಿಲ್ಲಾ ಮಟ್ಟದ್ದ ಅಧಿಕಾರಿಗಳು, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿರುತ್ತಾರೆ.






ಕಂಪ್ಲಿ & ತೆಕ್ಕಲಕೋಟೆ ಠಾಣಾ ವ್ಯಾಪ್ತಿಯಲ್ಲಿ ಕಳೆದುಕೊಂಡಿದ್ದ ಮೊಬೈಲ್ ಗಳನ್ನು CEIR PORTAL ಮೂಲಕ ಪತ್ತೆ ಮಾಡಿ ವಾರಸುದಾರರಿಗೆ ಒಪ್ಪಿಸಿದೆ,


ಮಾನ್ಯ ಶ್ರೀ ಪ್ರದೀಪ್ ಗುಂಟಿ, ಐ.ಪಿ.ಎಸ್, ಪೊಲೀಸ್ ವರಿಷ್ಠಾಧಿಕಾರಿಗಳು, ಬೀದರ ಜಿಲ್ಲೆ ರವರ ನಿರ್ದೇಶನ ಮತ್ತು ನೇರ ಮಾರ್ಗದರ್ಶನದಂತೆ, ಜನವಾಡಾ ಪೊಲೀಸ್ ಠಾಣಾ ವ್ಯಾಪ್ತಿಯು ಮರಖಲ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟದಲ್ಲಿ ತೊಡಗಿದ ಮಾಹಿತಿಯಂತೆ, ಶ್ರೀ ಬಾಷುಮಿಯಾ, ಪಿ.ಎಸ್.ಐ ರವರು ತಮ್ಮ ಅಧಿಕಾರಿ, ಸಿಬ್ಬಂದಿ ರವರೊಂದಿಗೆ ಮಟಕಾ ಚೀಟಿ ಬರೆದುಕೊಳ್ಳುತ್ತಿದ್ದವನ ಮೇಲೆ ದಾಳಿ ಮಾಡಿ ಅವನಿಂದ 740=00 ರೂಪಾಯಿ ವಶ ಪಡಿಸಿಕೊಂಡು ಆರೋಪಿತರ ವಿರುದ್ಧ ಕಾನೂನಿನ ರಿತ್ಯ ಕ್ರಮ ಕೈಕೊಳ್ಳಲಾಗಿದೆ.
ಮಟಕಾ ಜೂಜಾಟ ದಾಳಿಯಲ್ಲಿ ಶ್ರಮಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯಕ್ಕೆ ಶ್ಲಾಘಿಸಲಾಗಿದೆ.
ಬೀದರ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣಕ್ಕಾಗಿ ಜಿಲ್ಲೆಯ ಪೊಲೀಸರ ಕಾರ್ಯಾಚರಣೆಯು ಮುಂದುವರೆಯುತ್ತದೆ.

ಕೋಲಾರ ನಗರ ಮತ್ತು ಶ್ರೀನಿವಾಸಪುರ ಪೊಲೀಸ್ ಠಾಣೆಗಳಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಗಳು ಕಳುವಾಗಿರುವ ಬಗ್ಗೆ ದೂರು ನೀಡಿದ್ದು ಅದರಂತೆ ಸಿ. ಇ. ಐ.ಅರ್ ಪೋರ್ಟೆಲ್ ಮೂಲಕ ಕಳುವಾಗಿದ್ದ ಮೊಬೈಲ್ಗಳನ್ನು ಪತ್ತೆ ಮಾಡಿ ಮಾಲೀಕರಿಗೆ ಹಸ್ತಾಂತರಿಸಲಾಯಿತು.






