ರಾಜಾಜಿನಗರ ಸಂಚಾರ ಪೊಲೀಸ್ ಸ್ಟೇಷನ್ ಬೆಂಗಳೂರು

0

ಠಾಣೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ತ್ಯಾಗವನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು. ಸಮಸ್ತ ನಾಗರಿಕರಿಗೆ, ಬೆಂಗಳೂರು ನಗರ ಸಂಚಾರ ಪೊಲೀಸ್ ವತಿಯಿಂದ, 79ನೇ ಸ್ವಾತಂತ್ರೋತ್ಸವದ ಶುಭಾಶಯಗಳು.

ಬನಶಂಕರಿ ಪೊಲೀಸ್ ಸ್ಟೇಷನ್ ಬೆಂಗಳೂರು

0

ಸ್ವಾತಂತ್ರ್ಯ ಮತ್ತು ಏಕತೆಯ ಮನೋಭಾವ ನಮ್ಮ ಹೃದಯಗಳಲ್ಲಿ ಸದಾ ಜೀವಂತವಾಗಿರಲಿ. 79ನೇ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು ಮನಸ್ಸಿನ ಸ್ವಾತಂತ್ರ್ಯವೇ ನಿಜವಾದ ಸ್ವಾತಂತ್ರ್ಯ — ಡಾ. ಬಿ.ಆರ್. ಅಂಬೇಡ್ಕರ್. ಈ 79ನೇ ಸ್ವಾತಂತ್ರ್ಯ ದಿನವನ್ನು ನಾವು ಬನಶಂಕರಿ ಪೊಲೀಸ್‌ ಠಾಣೆಯಲ್ಲಿ ನಮ್ಮ ಅಧಿಕಾರಿಗಳು, ಸಿಬ್ಬಂದಿ ಹಾಗೂ ಬಿಎಂ ಎಸ್ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಸಂಭ್ರಮದಿಂದ ಆಚರಣೆ.

ಶಿವಮೊಗ್ಗ ಪೊಲೀಸ್ ರಿಂದ ಸ್ವಾತಂತ್ರ್ಯ ದಿನಾಚರಣೆ

0

ದಿನಾಂಕಃ 15-08-2025 ರಂದು ಬೆಳಗ್ಗೆ 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಧ್ವಜಾರೋಹಣವನ್ನು ನೆರವೇರಿಸಿ, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂಧಿಗಳಿಗೆ ಶುಭಾಶಯಗಳನ್ನು ಕೋರಿದರು.

ನಂತರ ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿ, FPU, TMC ಹಾಗೂ DAR ಘಟಕದಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿ/ ಸಿಬ್ಬಂಧಿ ಮತ್ತು ಲಿಪಿಖ ಸಿಬ್ಬಂಧಿಗಳು ಸೇರಿದಂತೆ ಶಿವಮೊಗ್ಗ ಜಿಲ್ಲಾ ಪೊಲೀಸ್ ನ ಒಟ್ಟು 25 ಜನರಿಗೆ ಪ್ರಶಂಸನಾ ಪತ್ರವನ್ನು ನೀಡಿ ಅಭಿನಂದಿಸಲಾಯಿತು.

ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ನಗರದ ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ನಿರೀಕ್ಷಕರು, ಪೊಲೀಸ್ ವೃತ್ತ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು ಹಾಗೂ ಜಿಲ್ಲಾ ಪೊಲೀಸ್‌ ಕಛೇರಿಯ ಅಧಿಕಾರಿ ಸಿಬ್ಬಂದಿಗಳು ಮತ್ತು ಲಿಪಿಖ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಆವಲಹಳ್ಳಿ ಪೊಲೀಸ್ ಸ್ಟೇಷನ್ ಬೆಂಗಳೂರು

0

ನಾಡಿನ ಸಮಸ್ತ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಸ್ವಾತಂತ್ರ್ಯಕ್ಕಾಗಿ ಹೋರಾಡಿ, ಪ್ರಾಣ ತ್ಯಾಗ ಮಾಡಿದ ಎಲ್ಲ ಮಹನೀಯರನ್ನು ಸ್ಮರಿಸಿ, ಗೌರವಿಸೋಣ. ಏಕತೆ, ಸಹೋದರತ್ವ ಮತ್ತು ದೇಶಭಕ್ತಿಯ ಹಾದಿಯಲ್ಲಿ ಹೆಮ್ಮೆಯಿಂದ ಸಾಗೋಣ.