
ಮೈಸೂರು ನಗರ ಪೊಲೀಸ್
ಪೊಲೀಸ್ ಆಯುಕ್ತರ ಕಛೇರಿಯ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮಾನ್ಯ ಪೊಲೀಸ್ ಆಯುಕ್ತರಾದ ಶ್ರೀಮತಿ ಸೀಮಾ ಲಾಟ್ಕರ್ IPS ರವರ ನೇತೃತ್ವದಲ್ಲಿ ಧ್ವಜಾರೋಹಣ ಮಾಡುವುದರ ಮೂಲಕ ಆಚರಿಸಲಾಯಿತು. ಎಲ್ಲಾ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ & ಅವರ ಕುಟುಂಬದವರಿಗೆ ಹಾಗು ನಾಡಿನ ಸಮಸ್ತ ಜನತೆಗೆ 79ನೇ ಸ್ವಾತಂತ್ರ್ಯ ದಿನಾಚರಣೆ ಶುಭಾಶಯ ಕೋರಿದರು. ಈ ಕಾರ್ಯಕ್ರಮದಲ್ಲಿ ಉಪ ಪೊಲೀಸ್ ಆಯುಕ್ತರುಗಳಾದ ಕುಮಾರಿ ಬಿಂದು ಮಣಿ RN IPS, ಕಾನೂನು & ಸುವ್ಯವಸ್ಥೆ, ಶ್ರೀ ಸುಂದರ್ ರಾಜ್ K.S. ಅಪರಾಧ & ಸಂಚಾರರವರು, ಶ್ರೀ ಸಿದ್ದನಗೌಡ ವೈ ಪಾಟೀಲ, CAR, ಶ್ರೀ ಮಾರುತಿ ಎ ಕಮಾಂಡೆಂಟ್ KARP Mounted & ಹಿರಿಯ ಪೊಲೀಸ್ ಅಧಿಕಾರಿಗಳು & ಸಿಬ್ಬಂದಿಗಳು ಉಪಸ್ಥಿತರಿದ್ದರು.
















ಬನಶಂಕರಿ ಪೊಲೀಸ್ ಸ್ಟೇಷನ್ ಬೆಂಗಳೂರು
ಸ್ವಾತಂತ್ರ್ಯ ಮತ್ತು ಏಕತೆಯ ಮನೋಭಾವ ನಮ್ಮ ಹೃದಯಗಳಲ್ಲಿ ಸದಾ ಜೀವಂತವಾಗಿರಲಿ. 79ನೇ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು ಮನಸ್ಸಿನ ಸ್ವಾತಂತ್ರ್ಯವೇ ನಿಜವಾದ ಸ್ವಾತಂತ್ರ್ಯ — ಡಾ. ಬಿ.ಆರ್. ಅಂಬೇಡ್ಕರ್. ಈ 79ನೇ ಸ್ವಾತಂತ್ರ್ಯ ದಿನವನ್ನು ನಾವು ಬನಶಂಕರಿ ಪೊಲೀಸ್ ಠಾಣೆಯಲ್ಲಿ ನಮ್ಮ ಅಧಿಕಾರಿಗಳು, ಸಿಬ್ಬಂದಿ ಹಾಗೂ ಬಿಎಂ ಎಸ್ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಸಂಭ್ರಮದಿಂದ ಆಚರಣೆ.




ಶಿವಮೊಗ್ಗ ಪೊಲೀಸ್ ರಿಂದ ಸ್ವಾತಂತ್ರ್ಯ ದಿನಾಚರಣೆ
ದಿನಾಂಕಃ 15-08-2025 ರಂದು ಬೆಳಗ್ಗೆ 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಧ್ವಜಾರೋಹಣವನ್ನು ನೆರವೇರಿಸಿ, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂಧಿಗಳಿಗೆ ಶುಭಾಶಯಗಳನ್ನು ಕೋರಿದರು.


ನಂತರ ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿ, FPU, TMC ಹಾಗೂ DAR ಘಟಕದಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿ/ ಸಿಬ್ಬಂಧಿ ಮತ್ತು ಲಿಪಿಖ ಸಿಬ್ಬಂಧಿಗಳು ಸೇರಿದಂತೆ ಶಿವಮೊಗ್ಗ ಜಿಲ್ಲಾ ಪೊಲೀಸ್ ನ ಒಟ್ಟು 25 ಜನರಿಗೆ ಪ್ರಶಂಸನಾ ಪತ್ರವನ್ನು ನೀಡಿ ಅಭಿನಂದಿಸಲಾಯಿತು.



ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ನಗರದ ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ನಿರೀಕ್ಷಕರು, ಪೊಲೀಸ್ ವೃತ್ತ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು ಹಾಗೂ ಜಿಲ್ಲಾ ಪೊಲೀಸ್ ಕಛೇರಿಯ ಅಧಿಕಾರಿ ಸಿಬ್ಬಂದಿಗಳು ಮತ್ತು ಲಿಪಿಖ ಸಿಬ್ಬಂದಿಗಳು ಉಪಸ್ಥಿತರಿದ್ದರು.














